ಉನ್ನತ ಶಿಕ್ಷಣ ಕ್ಷೇತ್ರಕ್ಕೆ 4514 ಕೋಟಿ ರು ಮೀಸಲಿಟ್ಟಿರುವ ಸಿಎಂ ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ, ಮೈಸೂರು ವಿವಿಯಲ್ಲಿ ಬಸವ ಅಧ್ಯಯನ ಕೇಂದ್ರ ಸ್ಥಾಪನೆ. ಬಸವ ಅಧ್ಯಯನ ಕೇಂದ್ರ ಸ್ಥಾಪನೆಗೆ 2 ಕೋಟಿ ಅನುದಾನ, ಬಾಗಲಕೋಟೆ ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ತಲಾ 1 ಕೋಟಿ, ಉನ್ನತ ಶಿಕ್ಷಣ ಪಡೆಯುವ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ, ಧಾರವಾಡ ಕರ್ನಾಟಕ ವಿವಿಯಲ್ಲಿ ಕೊಂಕಣಿ ಅಧ್ಯಯನ ಪೀಠಕ್ಕೆ 1 ಕೋಟಿ ಮೀಸಲಿಡಲಾಗಿದೆ, 5 ಹೊಸ ಮಹಿಳಾ ಪದವಿಪೂರ್ವ ಕಾಲೇಜು ಸ್ಥಾಪನೆ, 25 ವಿದ್ಯಾರ್ಥಿನಿ ನಿಲಯ, 4 ಬಿ.ಎಡ್ ಹಾಗೂ ಡಿ,ಎಡ್ ಕಾಲೇಜುಗಳ ಸ್ಥಾಪನೆ,25 ಹೊಸ ಮೊರಾರ್ಜಿ ದೇಸಾಯಿ ಶಾಲೆ ಆರಂಭ. ಬಿ.ಎಡಿ ಮತ್ತು ಡಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ 25 ಸಾವಿರ ರು ಪ್ರೋತ್ಸಾಹ ಧನ ಘೋಷಿಸಲಾಗಿದೆ.