ಕರ್ನಾಟಕ ಬಜೆಟ್ 2018: ಜಲ ಸಂಪನ್ಮೂಲ, ನೀರಾವರಿಗೆ 15.998 ಕೋಟಿ ರು. ಮೀಸಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ನೀರಾವರಿಗೆ ಒಟ್ಟು 15.998 ಕೋಟಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ಜಲ ಸಂಪನ್ಮೂಲ ಇಲಾಖೆಗೆ ಮತ್ತು ನೀರಾವರಿಗೆ ಒಟ್ಟು 15.998 ಕೋಟಿ ರುಪಾಯಿಗಳನ್ನು ಮೀಸಲಿಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬರ ಪೀಡಿತ ಪ್ರದೇಶಗಳಲ್ಲಿರುವ ಕೆರೆಗಳನ್ನು ತುಂಬಿಸಲು  ಬಜೆಟ್‌ನಲ್ಲಿ ಮೊದಲ ಆದ್ಯತೆ ನೀಡಿದ್ದು, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ನೀರಾವರಿ ಯೋಜನೆಗಳಿಗೆ ಒಟ್ಟು 15, 998 ಕೋಟಿ ರುಪಾಯಿ ಅನುದಾನ ಘೋಷಿಸಿದ್ದಾರೆ. 
ಜಲಾಶಯಗಳಿಂದ ಕಾಲುವೆ ಮೂಲಕ ಅಥವಾ ಏತ ನೀರಾವರಿ ಮೂಲಕ ಕೆರೆಗಳನ್ನು ತುಂಬಿಸಲು ಸುಮಾರು 4 ಸಾವಿರ ಕೋಟಿ ರುಪಾಯಿಗಳನ್ನು ಮೀಸಲಿಡಲಾಗಿದೆ.
ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ದಾವಣಗೆರೆ, ವಿಜಯಪುರ, ಮೈಸೂರು, ಬಳ್ಳಾರಿ, ರಾಯಚೂರು  ಜಿಲ್ಲೆಗಳು ಕೆರೆ ತುಂಬಿಸುವ ಯೋಜನೆಯಲ್ಲಿ ಸಿಂಹ ಪಾಲನ್ನು ಪಡೆದಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com