ಕರ್ನಾಟಕ ಬಜೆಟ್ 2018: ಆರೋಗ್ಯ ಮತ್ತು ಕುಟುಂಬ ಯೋಜನೆ ಇಲಾಖೆಗೆ ರೂ.6,645 ಕೋಟಿ

2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.6,645ಕೋಟಿಯನ್ನು ಮೀಸಲಿಟ್ಟಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.6,645ಕೋಟಿಯನ್ನು ಮೀಸಲಿಟ್ಟಿದ್ದಾರೆ. 
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಆಯವ್ಯಯ ಮಂಡಿಸುತ್ತಿರುವ ಸಿದ್ದರಾಮಯ್ಯ ಅವರು ಈ ವರ್ಷದ ಅಂತ್ಯದೊಳಗೆ ರಾಜ್ಯದಾದ್ಯಂತ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದಾರೆ. 
ಅಪೌಷ್ಠಿಕತೆ ನಿರ್ಮೂಲನೆ ಮಾಡಲು ಹಲವಾರು ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಇದರಂತೆ ಕ್ಷೀರಭಾಗ್ಯ, ಮೊಟ್ಟೆ ನೀಲಾಗುತ್ತದೆ. ಇದರಿಂದ ಮಕ್ಕಳ ಅಪೌಷ್ಠಿಕತೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಲಿದೆ. ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕಾಂಶ 8.31 ಲಕ್ಷ ಮಹಿಳೆಯರಿಗೆ ಪ್ರಯೋಜನವಾಗಲಿದೆ. ಹವಾಮಾನ, ಸಿಡಿಲು, ಮುನ್ನೆಚ್ಚರಿಕಾ ಆ್ಯಪ್ ನಿರ್ಮಾಣ ಮಾಡಲಿದ್ದು, ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ಧನವನ್ನು ನೀಡಲಾಗುತ್ತದೆ. 
ವೃದ್ಧಾಪ್ಯ ಯೋಜನೆ, ನಿರ್ಗತಿಕ ವಿಧವಾ ವೇತನ ಪಿಂಚಣಿಯಲ್ಲಿ ಹೆಚ್ಚಳ ಮಾಡಲಾಗುತ್ತದೆ. ಶಿವಮೊಗ್ಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸಾ ಸೌಲಭ್ಯ, ಆರೋಗ್ಯ ವಲಯಗಳ ನೀತಿ, ಕಾರ್ಯಕ್ರಮಗಳ ಶಿಫಾರಸ್ಸು ನೀಡಲು ರಾಜ್ಯ ಆರೋಗ್ಯ ಪರಿಷತ್ತು ಸ್ಥಾಪನೆ, ರಾಜ್ಯದ ಎಲ್ಲಾ ಜನತೆಗೆ ಆರೋಗ್ಯ ಕರ್ನಾಟಕ ಯೋಜನೆ, ವರ್ಷದ ಅಂತ್ಯದೊಳಗೆ ಯೋಜನೆ ಜಾರಿ ಮಾಡಲಾಗುತ್ತದೆ. ಗದಗ, ಕೊಪ್ಪಳ ಹಾಗೂ ಚಾಮರಾಜನಗರದ ವೈದ್ಯಕೀಯ ಕಾಲೇಜುಗಳಲ್ಲಿ ರೂ.100 ಕೋಟಿ ವೆಚ್ಚಗಳಲ್ಲಿ ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ, ಹಾಸನ, ಮೈಸೂರು, ಕಾರವಾರದಲ್ಲಿ ಕ್ಯಾನ್ಸರ ಚಿಕಿತ್ಸಾ ಘಟಕ ಸ್ಥಾಪನೆ, ಗುಲ್ಬರ್ಗಾ ವೈದ್ಯಕೀಯ ಕಾಲೇಜಿನಲ್ಲಿ ಸುಟ್ಟಗಾಯಗಳ ವಾರ್ಡ್ ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com