ಕರ್ನಾಟಕ ಬಜೆಟ್ 2018: ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಇಲಾಖೆಗೆ ರೂ.14,268 ಕೋಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2018-19 ನೇ ಸಾಲಿನ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಒಟ್ಟು 14, 263 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ರಾಮೀಣಾಭಿವೃದ್ದಿಯ (ಸಾಂದರ್ಭಿಕ ಚಿತ್ರ)
ಗ್ರಾಮೀಣಾಭಿವೃದ್ದಿಯ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2018-19 ನೇ ಸಾಲಿನ ಬಜೆಟ್ ನಲ್ಲಿ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ   ಒಟ್ಟು 14, 263 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ಗದಗ್ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ. 2017-18ನೇ ಶೈಕ್ಷಣಿಕ ವರ್ಷದಿಂದ ಐದು ಸ್ನಾತಕೋತ್ತರ ಕೋರ್ಸ್‍ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

2013 -ಮತ್ತು 14 ನೇ ಸಾಲಿನಿಂದ ರಾಜ್ಯದ 16 ಜಿಲ್ಲೆಗಳು, 97 ತಾಲೂಕ್ ಗಳು , 3500 ಗ್ರಾಮ ಪಂಚಾಯಿತಿಗಳು ಮತ್ತು 18, 107 ಗ್ರಾಮಗಳನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವ ಮೂಲಕ ಒಟ್ಟು 37,63 ಲಕ್ಷ ಶೌಚಾಲಯಗಳನ್ನು ನಿರ್ಮಿಸಿ ಶೇ.87ರಷ್ಟು ಸಾಧನೆ ಮಾಡಿ ಕರ್ನಾಟಕ ರಾಷ್ಟ್ರಮಟ್ಟದಲ್ಲೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಮಹಾತ್ಮಗಾಂಧಿ ನರೇಗಾ ಯೋಜನೆ ಅಡಿ 2013-14ರಿಂದ 32.93 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿ, 14.90 ಲಕ್ಷ ಆಸ್ತಿಗಳ ರಚನೆಗೆ 11,037 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದರು.

ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆ ಅಡಿ ಈವರೆಗೆ 9,983 ಕಿ.ಮೀ. ರಸ್ತೆಗಳನ್ನು ಅಭಿವೃದ್ದಿಗೊಳಿಸಲಾಗಿದೆ. 1,000 ಕೋಟಿ ರೂ. ವೆಚ್ಚದಲ್ಲಿ 875 ಗ್ರಾಮಗಳಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಈ ಸಾಲಿನಿಂದ ಆರಂಭಗೊಂಡಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com