ರಾಜ್ಯ ಸರ್ಕಾರದ ‘ಮಾಥೃಪೂರ್ಣ’ ಮತ್ತು ಕೇಂದ್ರ ಸರ್ಕಾರದ ‘ಮಾತೃವಂದನಾ’ ಕಾರ್ಯಕ್ರಮಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತಿದ್ದು,ಇವುಗಳ ಜೊತೆಗೆ “ಮುಖ್ಯಮಂತ್ರಿ ಮಾತೃಶ್ರೀ ಯೋಜನೆ”ಯನ್ನು ಹೊಸದಾಗಿ ರೂಪಿಸಿದೆ. ಈ ಹೊಸ ಯೋಜನೆಯಡಿ ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಹೆರಿಗೆ ಪೂರ್ವದ 3 ತಿಂಗಳು ಹಾಗೂ ಬಾಣಂತಿಯರಿಗೆ ಹೆರಿಗೆ ನಂತರದ 3 ತಿಂಗಳ ಕಾಲ ಮಾಸಿಕ 1,000 ರೂ. ಗಳನ್ನು ಅವರ ಆಧಾರ್ ಲಿಂಕ್ಡ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಈ ಮೊತ್ತವನ್ನು ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ ಹೆಚ್ಚಿಸಲಾಗುವುದು. ಈ ಯೋಜನೆಯು ತಾಯಿಯ ಮೊದಲ ಮಕ್ಕಳಿಗೆ ಅನ್ವಯವಾಗುತ್ತದೆ. ಈ ಯೋಜನೆಗೆ 350 ಕೋಡಿ ರೂ.ಗಳನ್ನು ಮೀಸಲಿಡಲಾಗಿದೆ. 2018ರ ನವೆಂಬರ್ 1ರಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದೆ.