ಮುಖ್ಯಮಂತ್ರಿಯಾಗಿ ಹಾಗೂ ಹಣಕಾಸು ಸಚಿವರಾಗಿ ಇಂದು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸಿ ಕುಮಾರಸ್ವಾಮಿ, ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ನೆರವು ನೀಡಬೇಕೆಂದು ಈ ಸಮುದಾಯದ ಬಹು ದಿನಗಳ ಬೇಡಿಕೆಯಾಗಿದೆ. ಹೀಗಾಗಿ ನಮ್ಮ ಸರ್ಕಾರವು ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಿದೆ. ಅಲ್ಲದೆ, ಇದಕ್ಕೆ 25 ಕೋಟಿ ರೂ.ಗಳನ್ನು ಒದಗಿಸಲಿದೆ ಎಂದು ತಿಳಿಸಿದರು.