ಕರ್ನಾಟಕ ಬಜೆಟ್: ಚನ್ನಪಟ್ಟಣದ ಕೆಎಸ್ಐಸಿ ಪುನೇಶ್ಚೇತನಕ್ಕೆ 5 ಕೋಟಿ ರು.

ಮೈಸೂರು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ರೀಲರುಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಉತ್ಪಾದಿಸುವ ರೇಷ್ಮೆ ಗೂಡಿಗೆ ಸ್ಥಳೀಯವಾಗಿ ಮಾರಾಟ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು:  ಮೈಸೂರು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ರೀಲರುಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಉತ್ಪಾದಿಸುವ ರೇಷ್ಮೆ ಗೂಡಿಗೆ ಸ್ಥಳೀಯವಾಗಿ ಮಾರಾಟ ವ್ಯವಸ್ಥೆ ಕಲ್ಪಿಸಲು ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಜಿಲ್ಲೆಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ಸ್ಥಾಪಿಸಲಾಗುವುದು. ಇದಕ್ಕಾಗಿ 2018-19ನೇ ಸಾಲಿಗೆ ಒಂದು ಕೋಟಿ ರೂ. ಮೀಸಲಿಡಲಾಗಿದೆ.
ವಿಶ್ವಬ್ಯಾಂಕ್ ನೆರವಿನೊಂದಿಗೆ 70ರ ದಶಕದಲ್ಲಿ ರೇಷ್ಮೆ ಕೃಷಿಗೆ ಪೂರಕವಾಗಲೆಂದು ಬೆಂಗಳೂರು ಸಮೀಪದ ತಲಘಟ್ಟಪುರದಲ್ಲಿ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಲಾಗಿತ್ತು. ಈ ಸಂಸ್ಥೆಯ ಪೂರ್ಣ ಪ್ರಮಾಣದ ಅನುಕೂಲ ಪಡೆಯಲು ತಜ್ಞರಿಂದ ಸಂಪೂರ್ಣ ಅಧ್ಯಯನ ನಡೆಸಿ ವರದಿ ಪಡೆದು ಈ ಸಂಸ್ಥೆಯ ಪುನಶ್ಚೇತನ ಮಾಡುವ ಉದ್ದೇಶಕ್ಕಾಗಿ 5 ಕೋಟಿ ರೂ.ಗಳನ್ನು ನೀಡಲಾಗುವುದು.
ಸಾಂಪ್ರದಾಯಿಕ ರೇಷ್ಮೆ ವಸ್ತ್ರ ಉತ್ಪಾದನೆಯ ಜೊತೆಗೆ ರೇಷ್ಮೆ ಉಪ ಉತ್ನನ್ನಗಳಿಗೆ ಮಾರುಕಟ್ಟೆ  ಕಲ್ಪಿಸಲು  2 ಕೋಟಿ ರು ಮಿಸಲಿಡಲಾಗಿದೆ.
ಚನ್ನಪಟ್ಟಣದಲ್ಲಿರುವ ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ (ಕೆ.ಎಸ್.ಐ.ಸಿ) ಘಟಕದ ಪುನಶ್ಚೇತನಕ್ಕಾಗಿ 5 ಕೋಟಿ ರೂ.ಗಳನ್ನು ಒದಗಿಸಲಾಗುವುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com