ರಾಜ್ಯ ಬಜೆಟ್ 2018: ಅನ್ನಭಾಗ್ಯ ಯೋಜನೆಯಲ್ಲಿ ಕೆಲ ಬದಲಾವಣೆ

ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದು, ಹಿಂದಿನ ಸರ್ಕಾರದ ಜನಪ್ರಿಯ ಯೋಜನೆ ಅನ್ನಭಾಗ್ಯದಲ್ಲಿ ಕೆಲ ಬದಲಾವಣೆಗಳನ್ನು ಮಾಡಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದು, ಹಿಂದಿನ ಸರ್ಕಾರದ ಜನಪ್ರಿಯ ಯೋಜನೆ ಅನ್ನಭಾಗ್ಯದಲ್ಲಿ ಕೆಲ ಬದಲಾವಣೆಗಳನ್ನು ಮಾಡಿದ್ದಾರೆ. 
2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವರೂ ಆಗಿರುವ ಕುಮಾರಸ್ವಾಮಿಯವರು, ಅನ್ನಭಾಗ್ಯ ಯೋಜನೆಯಲ್ಲಿ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಲಾಗಿದೆ ಎಂದು ಘೋಷಣೆ ಮಾಡಿದ್ದಾರೆ. 
ಬಿಪಿಎಲ್ (ಬಡತನ ರೇಖೆಗಿಂತ ಕಡಿಮೆ ಇರುವವರು) ಕಾರ್ಡ್ ಹೊಂದಿರುವವರಿಗೆ ಅಕ್ಕಿ ಜೊತೆಗೆ 1 ಕೆಜಿ ಪಾಮ್ ಆಯಿಲ್, ರಿಯಾಯಿತಿ ದರದಲ್ಲಿ ಅರ್ಧ ಕೆಜಿ ತೊಗದಲಿ ಬೇಳೆ, 1 ಕೆಜಿ. ಆಯೋಡಿನ್ ಉಪ್ಪು ಹಾಗೂ 1 ಕೆಜಿ ಸಕ್ಕರೆ ವಿತರಿಸುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com