ಶಿಕ್ಷಣ ಇಲಾಖೆಗೆ ಬಜೆಟ್ ನಲ್ಲಿ ಮನ್ನಣೆ
ರಾಜ್ಯ ಬಜೆಟ್
ರಾಜ್ಯ ಬಜೆಟ್ 2018: ಶಿಕ್ಷಣ ಕ್ಷೇತ್ರಕ್ಕೆ ಶೇ.11ರಂತೆ 26,581 ಕೋಟಿ ರೂ ಅನುದಾನ
ಸಿಎಂ ಕುಮಾರಸ್ವಾಮಿ ಅವರು ಗುರುವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ 2018ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.11ರಷ್ಟು ಅಂದರೆ 26, 581 ಸಾವಿರ ಕೋಟಿ ರೂಗಳನ್ನು ಮೀಸಲಿಡಲಾಗಿದೆ.
ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಗುರುವಾರ ಮಂಡಿಸುತ್ತಿರುವ ರಾಜ್ಯ ಬಜೆಟ್ 2018ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.11ರಷ್ಟು ಅಂದರೆ 26, 581 ಸಾವಿರ ಕೋಟಿ ರೂಗಳನ್ನು ಮೀಸಲಿಡಲಾಗಿದೆ.
ಪ್ರಮುಖವಾಗಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಕುರಿತು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಇದಲ್ಲದೆ ಸಚಿವ ಡಿಕೆ ಶಿವಕುಮಾರ್ ಅವರ ಸ್ನವಕ್ಷೇತ್ರ ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.
ಉಳಿದಂತೆ ಮಕ್ಕಳ ಕೊರತೆಯಿರುವ ಸರಕಾರಿ ಶಾಲೆಗಳನ್ನು ಸಮೀಪದ 1 ಕಿ.ಮೀ ವ್ಯಾಪ್ತಿಯಲ್ಲಿರುವ ಶಾಲೆಯ ಜತೆ ವಿಲೀನ, ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆ ಆರಂಭ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರದ ನಿರ್ಧಾರ ಮಾಡಿದೆ. ಅಂತೆಯೇ ಸರ್ಕಾರಿ ಶಾಲೆಯಲ್ಲಿ ಒಟ್ಟು 100 ಆಂಗ್ಲ ಮಾಧ್ಯಮ ತರಗತಿಗಳು ಆರಂಭ, ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ದುರಸ್ಥಿಗೆ 150 ಕೋಟಿ ರೂ, ಮೀಸಲು, ರಾಮ ನಗರದಲ್ಲಿ ಚಲನಚಿತ್ರ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುತ್ತದೆ.
ಕನ್ನಡ ಮಾಧ್ಯಮದ ಜೊತೆಗೆ 1000 ಇಂಗ್ಲೀಷ್ ಮಾಧ್ಯಮ ಶಾಲೆಗಳ ಸ್ಥಾಪನೆ, ವಿಕಲ ಚೇತನ ವಿದ್ಯಾರ್ಥಿಗಳ ವ್ಯಾಸಂಗಕ್ಕೆ 1 ಕೋಟಿ ರೂ ಮೀಸಲು ಮತ್ತು ಇಂದಿರಾ ನಗರದಲ್ಲಿ ವಿಶೇಷ ಶಿಕ್ಷಣ ತರಬೇತಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ