ಬಜೆಟ್ 2018: ಕೇಂದ್ರದಿಂದ ಮಲತಾಯಿ ಧೋರಣೆ ಎಂದ ಕೇಜ್ರಿವಾಲ್

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ 2018ನೇ ಸಾಲಿನ ಬಜೆಟ್ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತೀವ್ರ ....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಮಂಡಿಸಿದ 2018ನೇ ಸಾಲಿನ ಬಜೆಟ್ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮುಂದುವರೆಸಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರ ರಾಜಧಾನಿಯ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ನಾನು ಕೇಂದ್ರದ ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದೆ. ಆದರೆ ನನ್ನ ನಿರೀಕ್ಷೆ ಸುಳ್ಳಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 
ಜೇಟ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಸಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ತೆರಿಗೆ ಮತ್ತು ಸಂಕದಲ್ಲಿ ದೆಹಲಿಯ ಪಾಲಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೇಂದ್ರ ಸರ್ಕಾರ ದೆಹಲಿ ನಿವಾಸಿಗಳನ್ನು ಎರಡನೇ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಪೊಲೀಸರಿಗೆ ಯಾವುದೇ ಯೋಜನೆ ಘೋಷಿಸಿಲ್ಲ ಮತ್ತು ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ವಿದ್ಯುತ್ ಚಾಲಿತ ಬಸ್ ಗಳಿಗೆ 2 ಸಾವಿರ ಕೋಟಿ ರುಪಾಯಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಪ್ ಸರ್ಕಾರ ಮಾಡಿದ್ದ ಮನವಿಯನ್ನು ಕಡೆಗಣಿಸಲಾಗಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com