ನವದೆಹಲಿ: ಕ್ರಿಪ್ಟೊಕರೆನ್ಸಿಗಳನ್ನು ಕಾನೂನುಬದ್ಧ ಎಂದು ಸರ್ಕಾರ ಪರಿಗಣಿಸುವುದಿಲ್ಲ ಮತ್ತು ನ್ಯಾಯಸಮ್ಮತವಲ್ಲದ ಚಟುವಟಿಕೆಗಳಿಗೆ ಕ್ರಿಪ್ಟೊಕರೆನ್ಸಿಗಳನ್ನು ಬಳಸುವುದನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವ ಅರುಣ್ ಜೇಟ್ಲಿ ಒತ್ತಿ ಹೇಳಿದ್ದಾರೆ.