'ಸಮ್ಮಿಶ್ರ ಸರ್ಕಾರ' ಬಜೆಟ್ ನಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು?

ಪದವಿಪೂರ್ವ ವಿದ್ಯಾರ್ಥಿಗಳ ವೃತ್ತಿಪರ ಚಟುವಟಿಕೆಗಳಿಗೆ 2 ಕೋಟಿ ರೂಪಾಯಿಗಳ ಘೋಷಣೆ. ಸರ್ಕಾರಿ...

Published: 08th February 2019 12:00 PM  |   Last Updated: 08th February 2019 03:16 AM   |  A+A-


Posted By : SUD SUD
Source : Online Desk
ಬೆಂಗಳೂರು: ಪದವಿಪೂರ್ವ ವಿದ್ಯಾರ್ಥಿಗಳ ವೃತ್ತಿಪರ ಚಟುವಟಿಕೆಗಳಿಗೆ 2 ಕೋಟಿ ರೂಪಾಯಿಗಳ ಘೋಷಣೆ. ಸರ್ಕಾರಿ ಶಾಲೆಗಳು ಇಂಗ್ಲಿಷ್ ಮೀಡಿಯಂ ಕಡ್ಡಾಯ; ಮಲೆನಾಡು ಶಾಲಾ ವಿದ್ಯಾರ್ಥಿಗಳಿಗೆ ಛತ್ರಿ, ರೈನ್ಕೋಟ್ ಭಾಗ್ಯ ‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸುಭದ್ರ ಶಾಲೆ, ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಪಬ್ಲಿಕ್ ಸ್ಕೂಲ್, ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಇತ್ಯಾದಿಗಳನ್ನು ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಲಾಗಿದೆ.
 
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ, ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ 5 ಮೊರಾರ್ಜಿ ದೇಸಾಯಿ ಮುಸ್ಲಿಂ ಹೆಣ್ಣುಮಕ್ಕಳ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ 60ಕ್ಕೆ ಹೆಚ್ಚಳ,  ಬೆಂಗಳೂರು, ಮೈಸೂರು, ಕಲಬುರಗಿಗಳಲ್ಲಿ ಭಾಷಾ ಕಲಿಕಾ ಕೇಂದ್ರ ಸ್ಥಾಪನೆ, 5 ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಶಿಕ್ಷಣ ಸ್ಥಾಪನೆ, ವೃತ್ತಿ ಶಿಕ್ಷಣ ಅಭಿವೃದ್ಧಿಗೆ 2 ಕೋಟಿ ರೂ ನೆರವು, ಶಿಕ್ಷಕರಿಗಾಗಿ ಗುರು ಚೈತನ್ಯ ಕಾರ್ಯಕ್ರಮವನ್ನು ಸರ್ಕಾರ ಪ್ರಾರಂಭಿಸಲಿದೆ.

ಗುರುಚೇತನಾ ಕಾರ್ಯಕ್ರಮದ ಅಡಿ ಶಿಕ್ಷಕರ ಸಾಮರ್ಥ್ಯ ಹೆಚ್ಚಿಸುವ ತರಬೇತಿ 1 ಲಕ್ಷ ಶಿಕ್ಷಕರ ಸಾಮರ್ಥ್ಯ ಹೆಚ್ಚಳ ಗಿರಿ-ಟೀಚರ್ ಮೆಂಟರ್ ಕಾರ್ಯಕ್ರಮ, ಹೋಬಳಿ ಮಟ್ತದಲ್ಲಿ ಮುಂದಿನ 4 ವಷಗಳಲ್ಲಿ 1 ಸಾವಿರ ಪಬ್ಲಿಕ್ ಶಾಲೆಗಳ ನಿರ್ಮಾಣ, 1500 ಹೊಸ ಶಾಲ ಕಟ್ಟಡ ನಿರ್ಮಾಣ, ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಆದ್ಯತೆ. 1200 ಕೋಟಿ ರೂ ವೆಚ್ಚದಲ್ಲಿ ಯೋಜನೆ. ಮಲೆನಾಡು ಭಾಗಗಳ ವಿದ್ಯಾರ್ಥಿಗಳಿಗಾಗಿ ಶಾಲಾ ಸಂಪರ್ಕ ಸೇತು ಯೋಜನೆ. ಬಡವರ ಬಂಧು ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ, 7.5 ಕೋಟಿ ಅನುದಾನವನ್ನು ಸರ್ಕಾರ ಘೋಷಿಸಿದೆ.

ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಯೋಜನೆ 176 ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಒತ್ತು ಮಲೆನಾಡು, ಕರಾವಳಿ ಭಾಗದಲ್ಲಿ ಕಾಲುಸಂಕ ಯೋಜನೆಯನ್ನು ಸರ್ಕಾರ ಆರಂಭಿಸಲಿದೆ.
Stay up to date on all the latest ಕರ್ನಾಟಕ ಬಜೆಟ್ news with The Kannadaprabha App. Download now
facebook twitter whatsapp