ಕರ್ನಾಟಕ ಬಜೆಟ್ 2019: 5 ಕೋಟಿ ರೂ. ವೆಚ್ಚದಲ್ಲಿ ಮಂಗನ ಕಾಯಿಲೆ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಸ್ಥಾಪನೆ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೂ ಒತ್ತು ನೀಡಿದ್ದು, ಕಳೆದ 3 ತಿಂಗಳಿನಿಂದ ಜನರನ್ನು ಕಾಡಿರುವ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕಕ್ಕೆ 5 ಕೋಟಿ ರೂ. ಘೋಷಿಸಿದ್ದಾರೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೂ ಒತ್ತು ನೀಡಿದ್ದು, ಕಳೆದ 3 ತಿಂಗಳಿನಿಂದ ಜನರನ್ನು ಕಾಡಿರುವ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕಕ್ಕೆ 5 ಕೋಟಿ ರೂ. ಘೋಷಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಆರಂಭವಾಗಲಿದೆ.  ಕಳೆದ ನವೆಂಬರ್ ನಿಂದ ಫೆಬ್ರವರಿಯ ವರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕಿನ ಕೆಲ ಅರಣ್ಯ ಭಾಗಗಳಲ್ಲಿ ಈ ಕಾಯಿಲೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. 
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಮಂಗನ ಕಾಯಿಲೆ ದೃಢಪಡಿಸುವ ಪ್ರಯೋಗಾಲಯವಿದ್ದು, ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಸ್ಥಾಪನೆಯಿಂದ ಮತ್ತಷ್ಟು ಅನುಕೂಲವಾಗಲಿದೆ.
 ಅಪೌಷ್ಟಿಕತೆ ನಿವಾರಣೆಗೆ 1 ಕೋಟಿ ರೂ.
 ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸೂಕ್ತ ಆರೈಕೆಗಾಗಿ 49 ತಾಲ್ಲೂಕು ಆಸ್ಪತ್ರೆಗಳಲ್ಲಿ ಪೌಷ್ಟಿಕ ಪುನಶ್ಚೇತನ ಕೇಂದ್ರಗಳ ಸ್ಥಾಪನೆಗೆ 1 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಬಿಪಿಎಲ್‌ ಕಾರ್ಡ್‌ ದಾರರಾದ ಗರ್ಭಿಣಿಯರಿಗೆ 6 ತಿಂಗಳ ಮಾಸಿಕ ಸಹಾಯ ಧನ 1000 ರೂ ಗಳಿಂದ ರೂ 2000ಕ್ಕೆ ಏರಿಕೆ, ಪೌಷ್ಠಿಕ ಪುನಶ್ಚೇತನ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com