ಕರ್ನಾಟಕ ಬಜೆಟ್ 2019: ಮೀನುಗಾರಿಕೆ ಕ್ಷೇತ್ರ, ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

Published: 08th February 2019 12:00 PM  |   Last Updated: 08th February 2019 05:42 AM   |  A+A-


CMHDKumaraswamy

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

Posted By : ABN ABN
Source : Online Desk
ಬೆಂಗಳೂರು: ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಮೀನುಗಾರಿಕೆ ದೋಣಿಗಳಿಗೆ ಇಸ್ರೋ ಅಧಿಕೃತಗೊಳಿಸಿರುವ ಡಿಎಟಿ ಉಪಕರಣ ಅಳವಡಿಸಿಕೊಳ್ಳಲು ಶೇ. 50 ರಷ್ಟು ಸಹಾಯಧನ, 3 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಒಳನಾಡು ಮತ್ತು ಹಿನ್ನೀರು ಜಲಸಂಪನ್ಮೂಲದಲ್ಲಿ ಸಿಗಡಿ ಮತ್ತು ಮೀನು ಕೃಷಿಗೆ ಪ್ರೋತ್ಸಾಹ. 400 ಘಟಕಗಳಿಗೆ ಸಹಾಯಧನ ನೀಡಲು 2 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಒಳನಾಡಿನ ಕೆರೆಗಳಲ್ಲಿನ ಮೀನುಗಾರಿಕೆ ಗುತ್ತಿಗೆಗಳನ್ನು ಸಂಘ ಸಂಸ್ಥೆಗಳ ಬದಲು ಸ್ಥಳೀಯ ಮೀನುಗಾರರಿಗೆ ಮೀಸಲಿಡುವ ಕುರಿತು ಪರಿಶೀಲಿಸುವುದಾಗಿ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

ಮತ್ಸ್ಯಾಶ್ರಯ ಯೋಜನೆಯಜಿ ಪ್ರಗತಿಯಲ್ಲಿರುವ 2500 ಮನೆಗಳನ್ನು ಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನುಗಾರಿಕೆ ಚಟುವಟಿಕೆಗಳ ಅಭಿವೃದ್ಧಿಗೆ ಜೆಟ್ಟಿ ನಿರ್ಮಾಣ, ತ್ಯಾಜ್ಯ ನಿರ್ವಹಣಾ ಘಟಕಕ್ಕಾಗಿ 15 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

ರಾಜ್ಯದಲ್ಲಿ ಡೀಸೆಲ್ ಮತ್ತು ಸೀಮೆಎಣ್ಣೆ ಪಾಸ್ ಬುಕ್ ಪಡೆದಿರುವ ದೋಣಿಗಳಿಗೆ ಡೀಸೆಲ್, ಸೀಮೆಎಣ್ಣೆ ಸಬ್ಸಿಡಿಗಾಗಿ 148.5 ಕೋಟಿ ಮೀಸಲಿರಿಸುವ ಪ್ರಸ್ತಾಪವನ್ನು ಬಜೆಟ್ ನಲ್ಲಿ ಮಾಡಲಾಗಿದೆ.
Stay up to date on all the latest ಕರ್ನಾಟಕ ಬಜೆಟ್ news with The Kannadaprabha App. Download now
facebook twitter whatsapp