ಹಾಲಿನ ಪ್ರೋತ್ಸಾಹ ಧನ 1 ರೂಪಾಯಿ ಹೆಚ್ಚಳ; ಪ್ರವಾಸೋದ್ಯಮ ಅಭಿವೃದ್ಧಿಗೆ 41 ಕೋಟಿ ರೂ.

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪ್ರತಿ ಲೀಟರ್‌ ಹಾಲಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 6 ರೂ. ಗೆ ಹೆಚ್ಚಿಸಲಾಗಿದೆ.

Published: 08th February 2019 12:00 PM  |   Last Updated: 08th February 2019 07:08 AM   |  A+A-


Collective Photo

ಸಂಗ್ರಹ ಚಿತ್ರ

Posted By : ABN ABN
Source : UNI
ಬೆಂಗಳೂರು: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪ್ರತಿ ಲೀಟರ್‌ ಹಾಲಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 6 ರೂ. ಗೆ ಹೆಚ್ಚಿಸಲಾಗಿದೆ.

ಪ್ರಸ್ತುತ ಪ್ರತಿ ಲೀಟರ್‌ ಹಾಲಿಗೆ ಪ್ರೋತ್ಸಾಹ ಧನ 5 ರೂ.ನೀಡಲಾಗುತ್ತಿದೆ. ಈಗ ಅದಕ್ಕೆ ಒಂದು ರೂಪಾಯಿ ಹೆಚ್ಚಿಸಿ 6 ರೂ.ಗೆ ಏರಿಸಲಾಗಿದೆ.

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲು 2019-20ನೇ ಸಾಲಿನಲ್ಲಿ 1459 ಕೋಟಿ ರೂ.ವೆಚ್ಚ ಮಾಡಲಾಗುವುದು. ಕ್ಷೀರಭಾಗ್ಯ ಯೋಜನೆಗೆ ಒಟ್ಟು 638 ಕೋಟಿ ರೂ.ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಜೆಟ್‌ ಭಾಷಣದಲ್ಲಿ ತಿಳಿಸಿದರು.

ಅಂಗನವಾಡಿ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ನೀಡಲು 405 ಕೋಟಿ ರೂ. ಸೇರಿ ಒಟ್ಟಾರೆ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗೆ 2,502 ಕೋಟಿ ರೂ. ವಿನಿಯೋಗಿಸಲಾಗುವುದು ಎಂದು ಅವರು ತಿಳಿಸಿದರು.

ಪಶುಪಾಲನಾ ಇಲಾಖೆಯ ತಜ್ಞ ಪಶುವೈದ್ಯರ ಸೇವೆಯನ್ನು ಬಳಸಿಕೊಂಡು ಪಶುಪಾಲಕರ ಮನೆಯ ಬಾಗಿಲಲ್ಲಿ ರೋಗಗ್ರಸ್ಥ ಜಾನುವಾರುಗಳಿಗೆ ವಿಶೇಷ ತುರ್ತು ಚಿಕಿತ್ಸೆ ನೀಡಲು 2 ಕೋಟಿ ರೂ.ವೆಚ್ಚದಲ್ಲಿ 15 ಜಿಲ್ಲೆಗಳಲ್ಲಿ ಸುಸಜ್ಜಿತ ಪಶುಚಿಕಿತ್ಸಾ ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

ಬಡ ಕುಟುಂಬಗಳ ಆರ್ಥಿಕ ಸಬಲೀಕರಣ ಮತ್ತು ಸಾರ್ವಜನಿಕ ಪೌಷ್ಟಿಕ ಆಹಾರ ಪೂರೈಸುವ ದೃಷ್ಟಿಯಿಂದ 5 ಕೋಟಿ ರೂ. ವೆಚ್ಚದಲ್ಲಿ 10 ಸಾವಿರ ಬಡ ನಿರುದ್ಯೋಗಿ ಯುವಕ-ಯುವತಿಯರಿಗೆ ನಾಟಿ ಕೋಳಿ ಸಾಕಾಣಿಕೆ ಮಾಡಲು ಪ್ರೋತ್ಸಾಹ ನೀಡಲಾಗುವುದು ಎಂದು ಪ್ರಕಟಿಸಿದರು.

ದೇಶೀಯ ಕುರಿ ತಳಿಗಳಲ್ಲಿ ಅವಳಿ-ಜವಳಿ ಸಂತಾನೋತ್ಪತ್ತಿಯನ್ನು ಅಭಿವೃದ್ಧಿಗೊಳಿಸುವ ಯೋಜನೆಗೆ 2 ಕೋಟಿ ರೂ. ಮೀಸಲಿಡಲಾಗಿದೆ. ಮಂಗನ ಖಾಯಿಲೆ ಲಸಿಕೆ ತಯಾರಿಕೆಗೆ 5 ಕೋಟಿ ರೂ.ಮೀಸಲಿಡಲಾಗಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ 41 ಕೋಟಿ ರೂ
ಪ್ರಾಕೃತಿಕ ಸೌಂದರ್ಯ, ಶಿಲ್ಪಕಲೆಗೆ ಹೆಸರಾದ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಒಟ್ಟು 41 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಚಾಲುಕ್ಯರ ಶ್ರೀಮಂತ ಪರಂಪರೆ ಪರಿಚಯಿಸಲು ಬಾದಾಮಿಯನ್ನು ವಿಶ್ವವಿಖ್ಯಾತ ಪ್ರವಾತಸಿ ತಾಣವನ್ನಾಗಿ ಹಾಗೂ ಕರಕುಶಲ ಮಾರುಕಟ್ಟೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು.  ಪ್ರವಾಸಿಗರ ಅನುಕೂಲಕ್ಕಾಗಿ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸುವ ಉದ್ದೇಶಕ್ಕಾಗಿ 25 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.

ವಿಶ್ವ ವಿಖ್ಯಾತ ಹಂಪಿ ಮತ್ತು ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಪ್ರವಾಸಿಗರಿಗೆ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್ ಡೆಕ್ಕರ್ ತೆರೆದ ಬಸ್ ಗಳನ್ನು ಕೆ ಎಸ್ ಟಿ ಡಿ ವತಿಯಿಂದ ಆರಂಭಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 5 ಕೋಟಿ ರೂ. ಅನುದಾನ ನಿಗದಿಪಡಿಸಿದ್ದಾರೆ.  ಅಲ್ಲದೆ ಹಂಪೆಯಲ್ಲಿ “ಹಂಪಿ ವ್ಯಾಖ್ಯಾನ ಕೇಂದ್ರ” ಸ್ಥಾಪನೆಗೆ 1 ಕೋಟಿ ರೂ. ಪ್ರಕಟಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ “ಕರ್ನಾಟಕ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ”ದ ಆಯೋಜನೆಗೆ 2 ಕೋಟಿ ರೂ. ಅನುದಾನವನ್ನು ಎಚ್.ಡಿ. ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
Stay up to date on all the latest ಕರ್ನಾಟಕ ಬಜೆಟ್ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp