ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ವಿಭಜನೆ; ಹಾಸನದಲ್ಲಿ ಹೊಸ ಕ್ಯಾಂಪಸ್

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವನ್ನು ವಿಭಜಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ...

Published: 09th February 2019 12:00 PM  |   Last Updated: 09th February 2019 10:39 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : SUD SUD
Source : The New Indian Express
ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವನ್ನು ವಿಭಜಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ.

ಹಾಸನದಲ್ಲಿ ಇದರ ಹೊಸ ಕ್ಯಾಂಪಸ್ ನ್ನು ಸ್ಥಾಪಿಸುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮತ್ತು ವಿ.ವಿಯ ಭೌಗೋಳಿಕ ಪರಿಸರವನ್ನು ನೋಡಿಕೊಂಡು ಎಂಜಿನಿಯರಿಂಗ್ ಕಾಲೇಜುಗಳನ್ನು ಮರು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಆದರೆ ಸರ್ಕಾರದ ಈ ನಿರ್ಧಾರಕ್ಕೆ ತಜ್ಞರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಮಾಜಿ ಕುಲಪತಿ ಪ್ರೊ ಬಲವೀರ ರೆಡ್ಡಿ, ವಿಶ್ವವಿದ್ಯಾಲಯವನ್ನು ವಿಭಜಿಸುವ ಅಗತ್ಯವಿಲ್ಲ. ಕಾಲೇಜುಗಳ ಸಂಖ್ಯೆ ಹೆಚ್ಚಾಗಿದ್ದರೆ ತಂತ್ರಜ್ಞಾನ ಬಳಸಿ ಅದನ್ನು ನಿರ್ವಹಣೆ ಮಾಡಬಹುದು. ವಿಭಜನೆ ಅಗತ್ಯವಿದ್ದರೂ ಸಹ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲು ಹಾಸನ ಸರಿಯಾದ ಸ್ಥಳವಲ್ಲ. ಈಗಾಗಲೇ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ 200 ಎಕರೆ ಜಾಗವನ್ನು ಅಭಿವೃದ್ಧಿಪಡಿಸಲಾಗಿದೆ. ಅದನ್ನು ಸರ್ಕಾರ ಬಳಸಿಕೊಳ್ಳಬೇಕು ಎಂದರು.
Stay up to date on all the latest ಕರ್ನಾಟಕ ಬಜೆಟ್ news with The Kannadaprabha App. Download now
facebook twitter whatsapp