

ನವದೆಹಲಿ: ಪ್ರಧಾನ ಮಂತ್ರಿ ವಿಕಾಸ ಯೋಜನೆಯಡಿ ಜೀವನೋಪಾಯಕ್ಕೆ 1 ಕೋಟಿ ಯುವಕರಿಗೆ ತರಬೇತಿ ನೀಡಲಾಗುವುದು ಎಂದು ಕೇಂದ್ರ ವಿತ್ತ ಖಾತೆ ಸಚಿವ ಪಿಯೂಷ್ ಗೋಯಲ್ ಮಧ್ಯಂತರ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಈಗಿರುವ ಮೀಸಲಾತಿ ವ್ಯವಸ್ಥೆಗೆ ಯಾವುದೇ ಧಕ್ಕೆಯುಂಟಾಗದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10ರಷ್ಟು ಮೀಸಲಾತಿ ತಂದಿರುವುದು ಕೇದ್ರ ಎನ್ ಡಿಎ ಸರ್ಕಾರದ ಸಾಧನೆ ಎಂದು ಹಣಕಾಸು ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ದೇಶದಲ್ಲಿ 21 ಅಖಿಲ ಭಾರತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿದ್ದು 22ನೇ ಸಂಸ್ಥೆಯನ್ನು ಹರ್ಯಾಣದಲ್ಲಿ ಸ್ಥಾಪಿಸಲಾಗುವುದು ಎಂದು ಸಚಿವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಿದರು.ಇತಿಹಾಸದಲ್ಲೆ ಮೊದಲ ಬಾರಿಗೆ ಎಂಎಸ್ ಪಿ, ಶೇ.50 ರಷ್ಟು ಏರಿಕೆ, ರಾಷ್ಟ್ರೀಯ ಶೈಕ್ಷಣಿಕ ಯೋಜನೆಗೆ 38,572 ಕೋಟಿ ರೂಪಾಯಿಮೀಸಲಿಡಲಾಗಿದೆ.
ಶಿಕ್ಷಣ ಸಾಲ ಪಡೆದವರಿಗೆ ತೆರಿಗೆ ವಿನಾಯ್ತಿಯನ್ನು ನೀಡಲಾಗಿದೆ.