

ನವದೆಹಲಿ: ರೈತರು, ಬಡವರು ಮತ್ತು ಸಣ್ಣ ಮಧ್ಯಮ ವರ್ಗದವರ ಏಳಿಗೆಗೆ ಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯಲ್ ಶುಕ್ರವಾರ ಮಂಡಿಸಿರುವ ಮಧ್ಯಂತರ ಬಜೆಟ್ ನಲ್ಲಿ ಅಧಿಕ ಮೊತ್ತ ಮೀಸಲಿಟ್ಟಿದ್ದಾರೆ.
ವಾರ್ಷಿಕವಾಗಿ ಸಣ್ಣ ಮತ್ತು ಬಡ ರೈತರಿಗೆ 6 ಸಾವಿರ ರೂಪಾಯಿ ಧನಸಹಾಯ ಘೋಷಿಸಿರುವ ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ ಉದ್ಯೋಗ ಅವಕಾಶಗಳ ಸೃಷ್ಟಿಗೆ ವಾರ್ಷಿಕ 60 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
ಗೋವುಗಳ ರಕ್ಷಣೆ ಮತ್ತು ಅವುಗಳ ಉತ್ಪನ್ನಗಳ ಬಳಕೆಗೆ ಯೋಜನೆಗಳು ಮತ್ತು ಅನುದಾನ ಮೀಸಲಿಟ್ಟಿರುವ ಬಗ್ಗೆ ಯೋಜನೆ ತಿಳಿಸಿದರು. ಸುಮಾರು 12 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದರು.
2018-19ರಲ್ಲಿ ಬಡ ಜನರಿಗೆ ಕೈಗೆಟಕುವ ದರದಲ್ಲಿ ಆಹಾರ ಒದಗಿಸಲು ಕೇಂದ್ರ ಸರ್ಕಾರ 1,70,000 ಕೋಟಿ ರೂಪಾಯಿ ಖರ್ಚು ಮಾಡಿದೆ. ಉದ್ಯೋಗ ಖಾತ್ರಿ ಯೋಜನೆಗೆ 60 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದ್ದು ಅಗತ್ಯಬಿದ್ದರೆ ಅನುದಾನ ಹೆಚ್ಚಿಸಲಾಗುವುದು ಎಂದು ಪಿಯೂಷ್ ಗೋಯಲ್ ತಿಳಿಸಿದರು.
ಗ್ರಾಮೀಣ ಭಾಗದ ಜನಜೀವನ ಮಟ್ಟ ಸುಧಾರಣೆಗೆ ಮೂಲಭೂತ ಸೌಕರ್ಯಗಳಾದ ರಸ್ತೆ ನಿರ್ಮಾಣ, ಸಂಚಾರ ಸೌಲಭ್ಯಗಳಿಗೆ 14.80 ಲಕ್ಷ ಜನರಿಗೆ ಅನುಕೂಲವಾಗಿದೆ ಎಂದರು.
Advertisement