ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳ ಘೋಷಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋದಿ ಸರ್ಕಾರ ಜನಪ್ರಿಯ ಯಜನೆಗಳನ್ನು ಘೋಷಣೆ ಮಾಡಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋದಿ ಸರ್ಕಾರ ಜನಪ್ರಿಯ ಯಜನೆಗಳನ್ನು ಘೋಷಣೆ ಮಾಡಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕೇಂದ್ರ ಬಜೆಟ್ 2019 ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇಂದು ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಇದು ಎಲ್ಲರಿಗೂ ತಿಳಿದಿರುವ ಸತ್ಯವೇ ಆಗಿದೆ. ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಈ ಹಂತದಲ್ಲಿ ಮೋದಿ ಸರ್ಕಾರ ಬಜೆಟ್ ಮೂಲಕ ಮತದಾರರನ್ನು ಓಲೈಸುವ ಕಾರ್ಯಕ್ಕೆ ಖಂಡಿತಾ ಮುಂದಾಗುತ್ತದೆ. ಇದೇ ಕಾರಣಕ್ಕೆ ಮೋದಿ ಸರ್ಕಾರ ಜನಪ್ರಿಯ ಘೋಷಣೆಗಳನ್ನು ಮಾಡಿ ಮತದಾರರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡಲಿದೆ.
ಹಾಲಿ ಬಜೆಟ್ ಗಳು ಕೇವಲ ಜನಪ್ರಿಯ ಯೋಜನೆಗಳಾಗಿರಲಿವೆಯಷ್ಟೇ.. ಆದರೆ ಇದರಿಂದ ಜನ ಸಾಮಾನ್ಯರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಜನಪ್ರಿಯ ಘೋಷಣೆ ಮಾಡಿ ಬಾಕಿ ಉಳಿದಿರುವ 4 ತಿಂಗಳಲ್ಲಿ ಅದು ಹೇಗೆ ಈ ಎಲ್ಲ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com