ದೇಶದ 17 ಪ್ರಮುಖ ಪ್ರವಾಸಿ ತಾಣಗಳು ವಿಶ್ವ ದರ್ಜೆ ಮಟ್ಟದಲ್ಲಿ ಅಭಿವೃದ್ಧಿ- ನಿರ್ಮಲಾ ಸೀತಾರಾಮನ್

ದೇಶದಲ್ಲಿನ 17 ಪ್ರಮುಖ ಪ್ರವಾಸಿ ತಾಣಗಳನ್ನು ವಿಶ್ವ ದರ್ಜೆ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
ನವದೆಹಲಿ: ದೇಶದಲ್ಲಿನ 17 ಪ್ರಮುಖ ಪ್ರವಾಸಿ ತಾಣಗಳನ್ನು ವಿಶ್ವ ದರ್ಜೆ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
ಲೋಕಸಭೆಯಲ್ಲಿಂದು ಕೇಂದ್ರ ಬಜೆಟ್ ಮಂಡಿಸಿದ ಅವರು, ಈ ಪ್ರವಾಸಿ ತಾಣಗಳಲ್ಲಿ ಉತ್ತಮ ದರ್ಜೆಯ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಬಜೆಟ್ ನಲ್ಲಿ ಬುಡುಕಟ್ಟು  ಇತಿಹಾಸ ಸಂರಕ್ಷಣೆಗಾಗಿ ಡಿಜಿಟಲ್ ಭಂಡಾರವನ್ನು ಸ್ಥಾಪಿಸುವ ಪ್ರಸ್ತಾವ ಮಾಡಲಾಗಿದೆ. 
ದೇಶದಲ್ಲಿ ಪ್ರಾವಾಸೋದ್ಯಮ ಅಭಿವೃದ್ಧಿಗಾಗಿ ವಿವಿಧ ಸಚಿವಾಲಯ ಹಾಗೂ ಪಾಲುದಾರರ ನಡುವಿನ ಸಮಸ್ಯೆಗಳನ್ನು ಬಗೆಹರಿಸಿ  ಸದೃಢ ಸಹಕಾರ ಮೂಡಿಸಬೇಕಾದ ಅಗತ್ಯವಿದೆ ಎಂದು ನಿನ್ನೆ  ಆರ್ಥಿಕ ಸಮೀಕ್ಷೆ ಮಂಡನೆ ವೇಳೆ ಹೇಳಿದ್ದ ನಿರ್ಮಲಾ ಸೀತಾರಾಮನ್, ರಾಜ್ಯಸರ್ಕಾರಗಳ ಸಹಭಾಗಿತ್ವದಲ್ಲಿ  ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
2017-18ನೇ ಸಾಲಿನಲ್ಲಿ 10.4 ಮಿಲಿಯನ್ ವಿದೇಶಿ ಪ್ರವಾಸಿಗಳು ರಾಷ್ಟ್ರಕ್ಕೆ ಆಗಮಿಸಿದ್ದರೆ 2018-19 ನೇ ಸಾಲಿನಲ್ಲಿ 10. 6 ಮಿಲಿಯನ್ ನಷ್ಟಾಗಿದ್ದು, ಶೇ, 14.2 ರಿಂದ ಶೇ, 2.1ಕ್ಕೆ ಕುಸಿದಿದೆ. ಹೋಟೆಲ್ ಹಾಗೂ ಪ್ರವಾಸೋದ್ಯಮದಲ್ಲಿನ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲೂ  1. 132 ಮಿಲಿಯನ್  ಡಾಲರ್ ನಿಂದ 1. 076 ಮಿಲಿಯನ್ ಡಾಲರ್ ಗೆ ಕುಸಿದಿದೆ ಎದು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com