ಬಜೆಟ್: ಆದಾಯ ತೆರಿಗೆ ವಿವರ ಸಲ್ಲಿಸಲು ಪಾನ್ ಅಗತ್ಯವಿಲ್ಲ -ನಿರ್ಮಲಾ ಸೀತಾರಾಮನ್

ಆದಾಯ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿ:ಆದಾಯ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿಂದು ಕೇಂದ್ರ ಬಜೆಟ್ ಮಂಡನೆ ವೇಳೆ ಈ ವಿಷಯ ತಿಳಿಸಿದ ಅವರು, ಪಾನ್ ಕಾರ್ಡ್ ಜೋಡಣೆಗೆ ವಿನಾಯಿತಿ ನೀಡಲಾಗಿದೆ. ತೆರಿಗೆ ಪಾವತಿ ಮಾಡುವವರು ಪಾನ್ ಕಾರ್ಡ್ ಹೊಂದಿಲ್ಲದಿದ್ದರೆ ಆಧಾರ್ ಸಂಖ್ಯೆ ನಮೂದಿಸಿ ಮುಂದುವರೆಯಬಹುದು ಎಂದು ಹೇಳಿದರು.
5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿದವರು ತೆರಿಗೆ ಪಾವತಿಸುವಂತಿಲ್ಲ ಎಂದು ಹೇಳಿದ ನಿರ್ಮಲಾ ಸೀತಾರಾಮನ್, ಮಧ್ಯಮ ವರ್ಗದವರಿಗೆ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. 15 ವರ್ಷದವರೆಗಿನ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದರು.
ಸ್ಟಾರ್ಟ್ ಅಪ್ ಕಂಪನಿಗಳಿಗೆ ಐಟಿ ಇಲಾಖೆ ಪರಿಶೀಲನೆಯಿಂದ ವಿನಾಯಿತಿ ನೀಡಲಾಗಿದೆ. ಬ್ಯಾಂಕ್ ಖಾತೆಯಿಂದ 1 ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತ ತೆಗೆದರೆ ಶೇ, 2 ರಷ್ಟು ತೆರಿಗೆ ವಿಧಿಸಲಾಗುವುದು, ನೇರ ತೆರಿಗೆ ಸಂಗ್ರಹ ಶೇ, 78 ರಷ್ಟು ಹೆಚ್ಚಾಗಿದ್ದು, 11 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com