ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಇದರಲ್ಲಿ ಕೃಷಿಕರಿಗೆ ಏನೆಲ್ಲಾ ಸಿಕ್ಕಿದೆ..ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ ನಲ್ಲಿ 2019-20ರ ಸಾಲಿನ ಹಣಕಾಸು ಬಜೆಟ್ ಮಂಡನೆ ಮಾಡಿದರು. .ಬಜೆಟ್ ನಲ್ಲಿ ಕೃಷಿಕರಿಗೆ ಸಿಕ್ಕಿದ್ದು.* ಶೂನ್ಯ ಬಂಡವಾಳ ಕೃಷಿಗೆ ಹೆಚ್ಚಿನ ಆದ್ಯತೆ. .* ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಒತ್ತು..* ಕೃಷಿಕರಿಗೆ ಸೂಕ್ತ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆಗೆ 10 ಸಾವಿರ ಹೊಸ ಕೃಷಿಕರ ಸಂಘ ಸ್ಥಾಪಿಸಲು ನಿರ್ಧಾರ..* ಸಾಂಪ್ರದಾಯಿಕ ಉದ್ದಿಮೆಗಳಿಗೆ ಉತ್ತೇಜನ ನೀಡಲು ನಿರ್ಧಾರ, ಜೇನು, ಬಿದಿರು ಖಾದಿ ಉದ್ಯಮಗಳಿಗೆ ಸರ್ಕಾರದ ಉತ್ತೇಜನ, ಪ್ರತಿ ವರ್ಷ 50 ಸಾವಿರ ಜನರಿಗೆ ನೆರವು..* ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ, ಪಿಎಂಜಿಎಸ್ ವೈ ಯೋಜನೆ ಗ್ರಾಮೀಣ ಜನರಲ್ಲಿ ಬದಲಾವಣೆ ತಂದಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos