ಕೇಂದ್ರ ಬಜೆಟ್: 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧಾರ- ನಿರ್ಮಲಾ ಸೀತಾರಾಮನ್

ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿಯಲ್ಲಿ 2019-20 ರಿಂದ 201-22ರ ಅವಧಿಯಲ್ಲಿ 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನವದೆಹಲಿ: ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿಯಲ್ಲಿ 2019-20 ರಿಂದ 201-22ರ ಅವಧಿಯಲ್ಲಿ 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು 
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಈ ವಿಷಯ ತಿಳಿಸಿದ ನಿರ್ಮಲಾ ಸೀತಾರಾಮನ್,  ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ   ಪ್ರತಿ ಮನೆಗೂ ಶೌಚಾಲಯ, ವಿದ್ಯುತ್, ಎಲ್ ಪಿಜಿ ಸೌಕರ್ಯ ಕಲ್ಪಿಸಲಾಗುವುದು, ಮನೆಗಳ ನಿರ್ಮಾಣದ ಅವಧಿಯನ್ನು 314ದಿನಗಳಿಂದ 114 ದಿನಗಳಿಗೆ ಇಳಿಸಲಾಗಿದೆ ಎಂದು ತಿಳಿಸಿದರು.
 ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 81 ಲಕ್ಷ ಮನೆಗಳ ನಿರ್ಮಾ ಮಾಡಲಾಗುವುದು, ಈಗಾಗಲೇ  26 ಲಕ್ಷ ಮನೆಗಳನ್ನು  ನಿರ್ಮಿಸಲಾಗಿದ್ದು,  24 ಲಕ್ಷ ಕುಟುಂಬಗಳಿಗೆ ಸೂರು ಭಾಗ್ಯ ಒದಗಿಸಲಾಗುವುದು, ನೂತನ ತಂತ್ರಜ್ಞಾನದಿಂದ ಆಧುನಿಕ ಮನೆ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು.
2022ರೊಳಗೆ ಎಲ್ಲರಿಗೂ ಪ್ರತಿಯೊಬ್ಬರಿಗೂ ಮನೆ ಒದಗಿಸಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com