ಬಜೆಟ್ ಹಿನ್ನೆಲೆ, ಆರ್ಥಿಕ ತಜ್ಞರೊಂದಿಗೆ ಮೋದಿ ಸಂವಾದ

ಮುಂದಿನ ತಿಂಗಳು ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಆರ್ಥಿಕ ಹಾಗೂ ಉದ್ಯಮ ತಜ್ಞರೊಂದಿಗೆ ಸಂವಾದ ನಡೆಸಿ, ಪ್ರಸ್ತುತದಲ್ಲಿನ ಆರ್ಥಿಕ ಪರಿಸ್ಥಿತಿ ಬಗ್ಗೆ ಸಲಹೆ, ಅಭಿಪ್ರಾಯಗಳನ್ನು ಪಡೆದುಕೊಂಡರು.
ಪ್ರಧಾನಿ ಮೋದಿ
ಪ್ರಧಾನಿ ಮೋದಿ
ನವದೆಹಲಿ:  ಮುಂದಿನ ತಿಂಗಳು ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ಇಂದು ಆರ್ಥಿಕ ಹಾಗೂ ಉದ್ಯಮ ತಜ್ಞರೊಂದಿಗೆ  ಸಂವಾದ ನಡೆಸಿ, ಪ್ರಸ್ತುತದಲ್ಲಿನ ಆರ್ಥಿಕ ಪರಿಸ್ಥಿತಿ ಬಗ್ಗೆ ಸಲಹೆ, ಅಭಿಪ್ರಾಯಗಳನ್ನು ಪಡೆದುಕೊಂಡರು.
ನೀತಿ ಆಯೋಗ ಆಯೋಜಿಸಿದ್ದ ಆರ್ಥಿಕ ನೀತಿ ಕುರಿತ ಸಂವಾದದಲ್ಲಿ 40 ಆರ್ಥಿಕ ತಜ್ಞರು ಹಾಗೂ ಇನ್ನಿತರ ತಜ್ಞರು ಪಾಲ್ಗೊಂಡಿದ್ದರು. ಸೂಕ್ಷ್ಮ ಆರ್ಥಿಕತೆ , ಉದ್ಯೋಗ, ಕೃಷಿ ಹಾಗೂ ಜಲ ಸಂಪನ್ಮೂಲ , ರಪ್ತು, ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಸಂವಾದದಲ್ಲಿ ಪಾಲ್ಗೊಂಡಿದ್ದವರು ತಮ್ಮ ಅಭಿಪ್ರಾಯ ಹಂಚಿಕೊಂಡರು ಎಂದು ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಆರ್ಥಿಕತೆಯಲ್ಲಿನ ವಿವಿಧ ಅಂಶಗಳ ಕುರಿತು ಸಲಹೆ, ಅಭಿಪ್ರಾಯಗಳನ್ನು ನೀಡಿದ್ದಕ್ಕಾಗಿ ಸಂವಾದದಲ್ಲಿ ಪಾಲ್ಗೊಂಡಿದ್ದವರಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ವಾಣಿಜ್ಯ ಮತ್ತು ಉದ್ಯಮ ಖಾತೆ ಸಚಿವ ಪಿಯೂಷ್ ಗೋಯೆಲ್ , ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ರಾವ್ ಇಂದ್ರಜಿತ್ ಸಿಂಗ್ , ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹಾಗೂ ಅನೇಕ ಹಿರಿಯ ಅಧಿಕಾರಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.
ಜುಲೈ 5 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019-20 ನೇ ಸಾಲಿನ ಮೋದಿ 2.0 ಸರ್ಕಾರದ ಪೂರ್ಣ ಪ್ರಮಾಣದ ಮೊದಲ ಬಜೆಟ್ ಮಂಡಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com