ರಾಜ್ಯ ಬಜೆಟ್; ಹೊಸ ಯೋಜನೆಗಳಿಲ್ಲ, ಮದ್ಯಪ್ರಿಯರಿಗೆ ಬರೆ!

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಪರೋಕ್ಷವಾಗಿ ಜನ ಸಾಮಾನ್ಯರ ಜೇಬಿಗೆ ಮತ್ತಷ್ಟು ಭಾರದ ಹೊರೆ ಹೊರಿಸಿದ್ದಾರೆ. ಹೊಸ ಯೋಜನೆ ಪ್ರಕಟ ಮಾಡದೇ ಇರುವ ಯೋಜನೆಗೆ ಬೆಲ್ಲ ಸವರಿದ್ದಾರೆ.  
ರಾಜ್ಯ ಬಜೆಟ್; ಹೊಸ ಯೋಜನೆಗಳಿಲ್ಲ ಮದ್ಯಪ್ರಿಯರಿಗೆ ಬರೆ!
ರಾಜ್ಯ ಬಜೆಟ್; ಹೊಸ ಯೋಜನೆಗಳಿಲ್ಲ ಮದ್ಯಪ್ರಿಯರಿಗೆ ಬರೆ!

ಬೆಂಗಳೂರು: ಮಂದಗತಿಯ ಆರ್ಥಿಕ ಪರಿಸ್ಥಿತಿ, ಕೇಂದ್ರದ ತೆರಿಗೆಯಲ್ಲಿ ರಾಜ್ಯಕ್ಕೆ ಬರಬೇಕಾದ ಪಾಲಿನಲ್ಲಿ ಬಹಳ ಕೊರತೆಯ ನಡುವೆ ಹೆಚ್ಚಿನ ಸಂಪನ್ಮೂಲ ಕೃಢೀಕರಣಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ, ಮದ್ಯದ ಮೇಲೆ ಅಬಕಾರಿ ತೆರಿಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.  
  
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಪರೋಕ್ಷವಾಗಿ ಜನ ಸಾಮಾನ್ಯರ ಜೇಬಿಗೆ ಮತ್ತಷ್ಟು ಭಾರದ ಹೊರೆ ಹೊರಿಸಿದ್ದಾರೆ. ಹೊಸ ಯೋಜನೆ ಪ್ರಕಟ ಮಾಡದೇ ಇರುವ ಯೋಜನೆಗೆ ಬೆಲ್ಲ ಸವರಿದ್ದಾರೆ.  
  
ವಿಧಾನಸೌಧದಲ್ಲಿ ಇಂದು 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಕೆಲ ದಿನಗಳ ಹಿಂದೆಯಷ್ಟೇ ಸಾರಿಗೆ ದರ ಹೆಚ್ಚಳ ಮಾಡಿರುವ ನಡುವೆಯೇ ಈಗ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ಹೊರಿಸಿ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದಾರೆ.
    
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಹಳ ಕನಸಿನ ಯೋಜನೆಯಾದ ಭಾಗ್ಯಲಕ್ಷಿ ಯೋಜನೆ ಸಾಲಾ ಮಕ್ಕಳಿಗೆ ಉಚಿತ ಸೈಕಲ್ ನೀಡುವ ಯೋಜನೆಯನ್ನು ಆರ್ಥಿಕ ಸಂಕಷ್ಟದ ನಡುವೆಯೂ ಮುಂದುವರಿಸಿಕೊಂಡು ಹೋಗುವುದಾಗಿ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. 
    
ನಿರುದ್ಯೋಗ ಸಮಸ್ಯೆ ನಿವಾರಿಸಲು ಹಾವೇರಿ ಜಿಲ್ಲೆಯ ಶಿಗ್ಗಾವಿ, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆ ಮಾಡಿ ಸ್ಥಳೀಯರಿಗೆ ಉದ್ಯೋಗ ನೀಡಲು ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಐತಿಹಾಸಿಕ ಪ್ರಾಚೀನ ದೇವಾಲಯಗಳಿದ್ದು, ಇವುಗಳ ಪುನರುಜ್ಜೀವನಕ್ಕಾಗಿ ಸಂರಕ್ಷಣಾ ಎಂಬ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ.
  
ರಾಜ್ಯಾದ್ಯಂತ ನಗರಪ್ರದೇಶಗಳಲ್ಲಿ ಸರ್ಕಾರಿ ಜಮೀನುಗಳನ್ನು ಖಾಸಗೀ ವ್ಯಕ್ತಿಗಳು ಮತ್ತು ಬಲಾಢ್ಯರು ಒತ್ತುವರಿ ಮಾಡುವುದನ್ನು ಪತ್ತೆ ಹಚ್ಚಿ ಸರ್ಕಾರಿ ಜಮೀನು ಸಂರಕ್ಷಣೆಗಾಗಿ ಜಮೀನು ಸಂರಕ್ಷಣಾ ಸಮಿತಿ ರಚಿಸಲಾಗುತ್ತಿದೆ.   
  
ಬಡವರು ಮತ್ತು ಮಧ್ಯಮ ವರ್ಗದವರ ಕನಸಿನ ಸೂರು ಕಟ್ಟಿಕೊಳ್ಳಲು ಅನುಕೂಲವಾಗುವಂತೆ 20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಅಪಾರ್ಟ್ ಮೆಂಟ್ ಗಳ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇ.5 ರಿಂದ 2ಕ್ಕೆ ಇಳಿಸುವ ಪ್ರಸ್ತಾಪ ಮಾಡಿದ್ದಾರೆ.
  
ರಾಜ್ಯದ ಬೊಕ್ಕಸಕ್ಕೆ ವರಮಾನ ತಂದುಕೊಡುವಲ್ಲಿ ಮಹತ್ವದ ಪಾತ್ರ ವಹಿಸಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ 12 ಸಾವಿರ ಕೋಟಿ ರೂ.ಆದಾಯ ಸಂಗ್ರಹ ಮಾಡಲಾಗುವ ಗುರಿ ಹೊಂದಲಾಗಿದೆ 
  
ಅಬಕಾರಿ ಇಲಾಖೆಯಿಂದ ಪ್ರಸಕ್ತ ವರ್ಷ 22 ಸಾವಿರ ಕೋಟಿ ತೆರಿಗೆ ಸಂಗ್ರಹ ಮಾಡುವ ಗುರಿ ಹೊಂದಲಾಗಿದೆ. ಸಾರಿಗೆ ಇಲಾಖೆಯಿಂದ 7 ಸಾವಿರ ಕೋಟಿ ರೂ.ಆದಾಯ ಸಂಗ್ರಹ ಮಾಡುವ ಗುರಿ  ಹೊಂದಲಾಗಿದೆ ಎಂದು ಹಣಕಾಸು ಸಚಿವರು ಪ್ರಕಟಿಸಿದ್ದಾರೆ. ಸಾರ್ವಜನಿಕ ಮತ್ತು ಖಾಸಗೀ ಸಹಭಾಗಿತ್ವದಲ್ಲಿ ಬೆಳಗಾವಿ, ಹುಬ್ಬಳ್ಳಿ ಮಂಗಳೂರು, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು  ತರಬೇತಿ ಕೇಂದ್ರಗಳಲ್ಲಿ 353 ಕೋಟಿ ರೂ. ವೆಚ್ಚದಲ್ಲಿ ಉತ್ಕೃಷ್ಟದ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಬಜೆಟ್ ನಲ್ಲಿ ಪ್ರಕಟಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com