ರಾಜ್ಯವನ್ನು ಶ್ರವಣ ದೋಷ ಮುಕ್ತ ಮಾಡಲು ಹೊಸ ಯೋಜನೆ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ  17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal  Intensive Care Unit) ಹಂತ ಹಂತವಾಗಿ ಉನ್ನತೀಕರಣ ಮಾಡಲಾಗುವುದು. ರಾಜ್ಯದ ವಿವಿಧ ಭಾಗಗಳಲ್ಲಿ  ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶ್ರವಣ ದೋಷ
ಶ್ರವಣ ದೋಷ

ಬೆಂಗಳೂರು: ರಾಜ್ಯದ  17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal  Intensive Care Unit) ಹಂತ ಹಂತವಾಗಿ ಉನ್ನತೀಕರಣ ಮಾಡಲಾಗುವುದು. ರಾಜ್ಯದ ವಿವಿಧ ಭಾಗಗಳಲ್ಲಿ  ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿಂದು ಪ್ರಸಕ್ತ ಸಾಲಿನ ಬಜೆಟ್‌ ಭಾಷಣ ಮಾಡಿದ ಅವರು, ರಾಜ್ಯವನ್ನು ಶ್ರವಣ ದೋಷ ಮುಕ್ತ ಮಾಡಲು ಆರು  ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್  ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ.  ಅನುದಾನ ನೀಡಲಾಗುವುದು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು  ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ ಮಾಡಲಾಗುವುದು.  ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ  ಪೆರಿಟೋನಿಯಲ್ ಡಯಾಲಿಸಿಸ್ ಸೇವೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

ಇಂಟರ್ಯಾಕ್ಟೀವ್ ಆನ್-ಲೈನ್ ಕೋರ್ಸ್‍ಗಳನ್ನು (M.O.O.C) ಪ್ರಾರಂಭ  ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ ಮಾಡಲಾಗುವುದು.  ವಿಶ್ವೇಶ್ವರಯ್ಯ  ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ.  ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ ಮಾಡಲಾಗುವುದು. ಏಷ್ಯಾ  ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ  ಆಯೋಜನೆ  ಮಾಡಲಾಗುವುದು. ಕೇಂದ್ರ  ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ  ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ   ವಿಸ್ತರಣೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಉತ್ತರ  ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ  ಮೇಲ್ದರ್ಜೆಗೆ ಏರಿಸಲಾಗುವುದು.  ಕೆ.ಸಿ.  ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ  ವಿಭಾಗಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉಸ್ಕೃಷ್ಟತಾ  ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ.  ಅನುದಾನ ನೀಡಲಾಗುವುದು. ಬೆಂಗಳೂರಿನ ಕೆ.ಸಿ.  ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ  ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್‍ಲ್ಯಾಬ್ ಸ್ಥಾಪನೆ ಮಾಡಲಾಗುವುದು.  ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ  ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ  ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್  ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್  ಸ್ಥಾಪನೆ ಮಾಡಲಾಗುವುದು. ರಾಜೀವ್ ಗಾಂಧಿ  ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು  ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ವೈದ್ಯಕೀಯ,  ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ  ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು  ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com