ಕರ್ನಾಟಕ ಬಜೆಟ್ 2020: ಬೆಂಗಳೂರು ಟ್ರಾಫಿಕ್ ಕಿರಿಕಿರಿಗೆ ಸಿಎಂ ಬಿಎಸ್ ವೈ ಟಾನಿಕ್!

ಬೆಂಗಳೂರು ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಬಜೆಟ್ ಮಂಡನೆಯಲ್ಲಿ ಒಂದಷ್ಚು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಬೆಂಗಳೂರು ಟ್ರಾಫಿಕ್
ಬೆಂಗಳೂರು ಟ್ರಾಫಿಕ್

ಬೆಂಗಳೂರು: ಬೆಂಗಳೂರು ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಬಜೆಟ್ ಮಂಡನೆಯಲ್ಲಿ ಒಂದಷ್ಚು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಪ್ರಮುಖವಾಗಿ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ಟ್ರಾಫಿಕ್ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ಸಿಲ್ಕ್ ಬೋರ್ಡ್ ನಿಂದ ಕೆ ಆರ್ ಪುರ ಹಾಗೂ ಹೆಬ್ಬಾಳ ಮುಖಾಂತರ ಅಂತರಾಷ್ಟ್ರೀಯ ಏರ್ ಪೋರ್ಟ್ ವರೆಗೆ 56 ಕಿಮೀ ಉದ್ದದ ಹೊರ ವರ್ತುಲ ರಸ್ತೆ ಮತ್ತು ಏರ್ ಪೋರ್ಟ್ ಮೆಟ್ರೋ ನಿರ್ಮಾಣಕ್ಕಾಗಿ 14,500 ಕೋಟಿ ರೂ. ಮೀಸಲಿಡಲಾಗಿದೆ.

ಬೆಂಗಳೂರಿನ ಜನನಿಭಿಡ ಪ್ರದೇಶದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ‘ಅಂಡರ್‍ಗ್ರೌಂಡ್ ವಾಹನ ಪಾರ್ಕಿಂಗ್’ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ 90 ಮೆಟ್ರೋ ಫೀಡರ್ ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗಿದ್ದು, ಬೆಂಗಳೂರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಂಪರ್ಕಕ್ಕೆ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ ಘೋಷಣೆ ಮಾಡಲಾಗಿದೆ.

ಅಂತೆಯೇ 12 ಕಾರಿಡಾರ್ ಗಳಲ್ಲಿ ಎರಡನೇ ಹಂತದ ಬಸ್ ಆದ್ಯತಾ ಪಥ ಆರಂಭಕ್ಕೆ ನಿೃರ್ಧಾರ ಕೈಗೊಳ್ಳಲಾಗಿದ್ದು, ಬೆಂಗಳೂರು ರಸ್ತೆ ಸುರಕ್ಷತಾ ನಿಧಿಗೆ 200 ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಅಂಡರ್ ಗ್ರೌಂಡ್ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕ ಸಾರಿಗೆಯ ಕೊನೆಯ ಮೈಲಿನ ಸಂಪರ್ಕ ಸುಧಾರಣೆಗೆ “ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ” ಯೋಜನೆ ಘೋಷಣೆ ಮಾಡಲಾಗಿದೆ. ಸಂಚಾರ ದಟ್ಟಣೆಯ 12 ಕಾರಿಡಾರ್‍ಗಳಲ್ಲಿ ಎರಡನೇ ಹಂತದ ಬಸ್ ಆದ್ಯತಾ ಪಥ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು. ಪ್ರಯಾಣಿಕ ಮತ್ತು ಸರಕು ಸಾಗಣೆ ವಾಹನಗಳಿಗೆ 20 ಕೋಟಿ ರೂ. ವೆಚ್ಚದಲ್ಲಿ Vehicle Location Tracking ವ್ಯವಸ್ಥೆ ಅಳವಡಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಸಂಚಾರ ದಟ್ಟಣೆಯ 12 ಕಾರಿಡಾರ್‍ಗಳಲ್ಲಿ ಎರಡನೇ ಹಂತದ ಬಸ್ ಆದ್ಯತಾ ಪಥ ಅನುಷ್ಠಾನಗೊಳಿಸಲು ಚಿಂತಿಸಲಾಗಿದ್ದು, ಸಮೂಹ ಸಾರಿಗೆಯನ್ನು ಉತ್ತೇಜಿಸಲು ಹಾಗೂ ಮೆಟ್ರೋ ಪ್ರಯಾಣಿಕರಿಗೆ ಸಮರ್ಪಕ ಮೆಟ್ರೋ ಫೀಡರ್ ಸಾರಿಗೆ ಸೌಲಭ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ 890 ಎಲೆಕ್ಟ್ರಿಕ್ ಬಸ್‍ಗಳೂ ಸೇರಿದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 2390 ಹೊಸ ಬಸ್‍ಗಳ ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 44 ಕಿ.ಮೀ. ಹೊಸ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ. ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 14,500 ಕೋಟಿ ರೂ. ಅಂದಾಜು ವೆಚ್ಚದಲ್ಲಿ 56 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆ – ಏರ್‍ಪೋರ್ಟ್ ಮೆಟ್ರೋ ನಿರ್ಮಾಣ ಪ್ರಾರಂಭ ಮಾಡಲಾಗುವುದು. 

ನಮ್ಮ ಮೆಟ್ರೊ ಯೋಜನೆಯಡಿ ಮೈಸೂರು ರಸ್ತೆಯಲ್ಲಿ ಕೆಂಗೇರಿಯವರೆಗೆ ಮತ್ತು ಕನಕಪುರ ರಸ್ತೆಯಲ್ಲಿ ಅಂಜನಾಪುರ  ಟೌನ್‍ಷಿಪ್ ವರೆಗೆ ಒಟ್ಟು 12.8 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿ ಪೂರ್ಣಗೊಳಿಸಿ, 2020 ರಲ್ಲಿ ಸೇವೆ ಒದಗಿಸಲು ಕ್ರಮ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ವಾಹನ ದಟ್ಟಣೆ ಇರುವ ರಸ್ತೆಗಳ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಹೆಬ್ಬಾಳ, ಸಿಲ್ಕ್ ಬೋರ್ಡ್ ಹಾಗೂ ಕೆ.ಆರ್.ಪುರಂ ಜಂಕ್ಷನ್‍ಗಳಲ್ಲಿ ಸಂಚಾರ ಸಾಮಥ್ರ್ಯ ಹೆಚ್ಚಳಕ್ಕೆ ಕ್ರಮಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ವೈ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com