ರಾಜ್ಯ ಬಜೆಟ್ 2020-21; ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ

ಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಈಗಾಗಲೇ ವಿಧಾನಸೌಧಕ್ಕೆ ಆಗಮಿಸಿದ್ದಾರೆ. 
ರಾಜ್ಯ ಬಜೆಟ್ 2020-21: ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ
ರಾಜ್ಯ ಬಜೆಟ್ 2020-21: ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಈಗಾಗಲೇ ವಿಧಾನಸೌಧಕ್ಕೆ ಆಗಮಿಸಿದ್ದಾರೆ. 

ಇಂದು ಬೆಳಿಗ್ಗೆ 11 ಗಂಟೆಗೆ ಯಡಿಯೂರಪ್ಪ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಪ್ರತಿಗಳು ಈಗಾಗಲೇ ವಿಧಾನಸೌಧ ತಲುಪಿವೆ. 

ಮಲ್ಲೇಶ್ವಂನ ಗಣಪತಿ ದೇಗುಲದಲ್ಲಿ ಬಜೆಟ್ ಇದ್ದ ಬ್ರೀಪ್ ಕೇಸ್'ಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಯಡಿಯೂರಪ್ಪ ಅವರು, ಸಕಾಲಕ್ಕೆ ಮಳೆಯಾಗಲಿ, ಉತ್ತಮ ಬೆಳೆ ಬರಲಿ, ರೈತರು ನೆಮ್ಮದಿಯಿಂದ ಬದುಕುವ ಪರಿಸ್ಥಿತಿ ರೂಪುಗೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸಿದ ಎಂದು ಹೇಳಿದ್ದಾರೆ. ಅಲ್ಲದೆ, ಉತ್ತಮ ಬಜೆಟ್ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. 

ರೈತಪರವಾದ ಬಜೆಟ್ ರೂಪಿಸಲು ಪ್ರಾಮಾಣಿಕ ಯತ್ನ ಮಾಡಿದ್ದೇನೆ. ಪ್ರತಿಪಕ್ಷಗಳು ಸಹಕಾರ ಕೊಡಬೇಕು. ಬಜೆಟ್ ಮೇಲಿನ ಚರ್ಚೆಗೆ ಒಂದಿಡೀ ತಿಂಗಳು ಅವಕಾಶವಿದೆ. ಕೃಷಿಯ ಅಗತ್ಯಗಳನ್ನು ಪೂರೈಸಲು ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದೇನೆಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com