2025ರ ವೇಳೆಗೆ ಭಾರತವನ್ನು ಕ್ಷಯರೋಗ ಮುಕ್ತವಾಗಿಸಲು ವಿಶೇಷ ಅಭಿಯಾನ: ನಿರ್ಮಲಾ ಸೀತಾರಾಮನ್

2025 ರ ವೇಳೆ ಭಾರತವನ್ನು ಕ್ಷಯರೋಗ ಮುಕ್ತವಾಗಿಸುವ  ಅಭಿಯಾನವನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಶನಿವಾರ ತಿಳಿಸಿದ್ದಾರೆ. 
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on: 

ನವದೆಹಲಿ: 2025 ರ ವೇಳೆ ಭಾರತವನ್ನು ಕ್ಷಯರೋಗ ಮುಕ್ತವಾಗಿಸುವ  ಅಭಿಯಾನವನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಶನಿವಾರ ತಿಳಿಸಿದ್ದಾರೆ.

2020-21ರ ಬಜೆಟ್ ಮಂಡಿಸಿದ ಸೀತಾರಾಮನ್, ಜನರಿಗೆ ಸುಲಭ ಬೆಲೆಯಲ್ಲಿ ಔಷಧಿ ದೊರಕುವಂತಾಗಲು ಜನೌಷಧಿ ಕೇಂದ್ರಗಳನ್ನು ದೇಶದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲು ತೀರ್ಮಾನಿಸಿರುವುದಾಗಿ ಹೇಳಿದ್ದಾರೆ.

ವೈದ್ಯಕೀಯ ಸಾಧನಗಳ ಮೇಲಿನ ತೆರಿಗೆಯಿಂದ ಬರುವ ಆದಾಯವನ್ನು ಆಸ್ಪತ್ರೆಗಳ ಸ್ಥಾಪನೆಗೆಬಳಸಲಾಗುತ್ತದೆ ಎಂದು ಅವರು ಹೇಳಿದರು. ಆಯುಷ್ಮಾನ್ ಭಾರತ್ ಅಡಿಯಲ್ಲಿ ಸುಸಜ್ಜಿತ ದ ಆಸ್ಪತ್ರೆಗಳಿಲ್ಲದ ಜಿಲ್ಲೆಗಳಲ್ಲಿ ಆಸ್ಪತ್ರೆಗಳನ್ನು ಸ್ಥಾಪಿಸಲು ಮತ್ತು ಕೃಷಿ ಉತ್ಪನ್ನಗಳಿಗೆ ಗೋದಾಮುಗಳನ್ನು ಸ್ಥಾಪಿಸಲು ಒತ್ತು ನೀಡಲಾಗುವುದು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್‌ಗಾಗಿ ಸರ್ಕಾರ 1.23 ಲಕ್ಷ ಕೋಟಿ ರೂ., ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ 1.6 ಲಕ್ಷ ಕೋಟಿ ರೂ.ಒದಗಿಸುವುದಾಗಿ ಸಚಿವೆ ಮಾಹಿತಿ ನೀಡಿದ್ದಾರೆ.

ಜಾನುವಾರುಗಳ ಉತ್ಪಾದಕತೆಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯ ವ್ಯಾಪ್ತಿಯನ್ನು ಶೇಕಡಾ 30 ರಿಂದ 70 ಕ್ಕೆ ವಿಸ್ತರಿಸಲು ಸರ್ಕಾರ ಯೋಜಿಸಿದೆ, 2022 ರ ವೇಳೆಗೆ ಮೀನು ಉತ್ಪಾದನೆಯನ್ನು 200 ಲಕ್ಷ ಟನ್‌ಗೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com