ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್!

ವಿಧಿ 370 ರದ್ಧತಿ ಬಳಿಕ ಇದೇ ಮೊದಲ ಬಾರಿಗೆ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿಧಿ 370 ರದ್ಧತಿ ಬಳಿಕ ಇದೇ ಮೊದಲ ಬಾರಿಗೆ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.

ಇಂದು ಸಂಸತ್ ನಲ್ಲಿ 2020ನೇ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಲಡಾಖ್, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದರು. ಪ್ರಮುಖವಾಗಿ ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್ ಗಾಗಿ 5,958 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿದ ನಿರ್ಮಲಾ ಸೀತಾರಾಮನ್ ಅವರು, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಯೋಜನೆಗಳಿಗಾಗಿ 30,757 ಕೋಟಿ ರೂಪಾಯಿಗಳ ಅನುದಾನ ಘೋಷಣೆ ಮಾಡಿದರು.

ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ವಿಧಿ 370ನ್ನು ರದ್ದುಗೊಳಿಸಿದ್ದು ಮಾತ್ರವಲ್ಲದೇ ಲಡಾಖ್ ಅನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯದಿಂದ ಬೇರ್ಪಡಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com