ಕೇಂದ್ರ ಬಜೆಟ್ ಜನಪರ, ರೈತರಿಗೆ ವರದಾನವಾಗುವ ಬಜೆಟ್: ಸಿಎಂ ಬಿಎಸ್ ವೈ ಮೆಚ್ಚುಗೆ

ಕೇಂದ್ರ ಬಜೆಟ್ ಜನಪರ ಬಜೆಟ್ ಆಗಿದ್ದು, ರೈತರಿಗೆ ವರದಾನವಾಗಲಿದೆ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಬಜೆಟ್ ಜನಪರ ಬಜೆಟ್ ಆಗಿದ್ದು, ರೈತರಿಗೆ ವರದಾನವಾಗಲಿದೆ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಹಣಕಾಸು ಸಚಿವೆ ಹಾಗೂ ಪ್ರಧಾನಿಗೆ ರಾಜ್ಯದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಯಾವುದೇ ತೆರಿಗೆ ಭಾರ ಹಾಕದೆ ವಿನೂತನ ಬಜೆಟ್ ಮಂಡನೆ‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಈ ಬಜೆಟ್ ನಲ್ಲಿ ರೈತರಿಗೆ, ಬಡವರಿಗೆ, ಗ್ರಾಮೀಣ ಜನರಿಗೆ ಸಾಕಷ್ಟು ಒತ್ತು ನೀಡಲಾಗಿದೆ. ರೈತರಿಗೆ ಈ ಬಜೆಟ್ ವರದಾನವಾಗಿದೆ ಎಂದು ಹೇಳಿದರು.

ದೇಶದ ಜಿಡಿಪಿ ಪ್ರಗತಿಗೆ ಈ ಬಜೆಟ್ ನೆರವಾಗಲಿದೆ. ರೈತರ ಉತ್ಪನ್ನ ಹೆಚ್ಚಿಸುವ ನಿಟ್ಟಿನಲ್ಲಿ ಈ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಕೃಷಿಗೆ ಈ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.
 
ಶಿಕ್ಷಣ ಕ್ಷೇತ್ರದಲ್ಲಿ ಎಫ್‌ಡಿಐಯಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ರಫ್ತಿಗೆ ಆದ್ಯತೆ ನೀಡಲಾಗಿದ್ದು, ಪ್ರತಿ ಜಿಲ್ಲೆಯಲ್ಲಿ ಎಕ್ಸ್ ಪೋರ್ಟ್ ಹಬ್ ಸ್ಥಾಪನೆಯಿಂದ ಅನುಕೂಲವಾಗಲಿದೆ. ಮೂಲಭೂತ ಸೌಕರ್ಯಕ್ಕೆ ಬಕೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉಪನಗರ ರೈಲು ಯೋಜನೆಗೆ 18,600 ಕೋಟಿ ರೂ. ಅನುಮೋದಿಸಿದ್ದಾರೆ. ಬೆಂಗಳೂರಿಗರ ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ. ಪಿಪಿಪಿ ಮಾದರಿಯಲ್ಲಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಯೋಗದೊಂದಿಗೆ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com