ಕೇಂದ್ರ ಬಜೆಟ್ 2020: ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಕೇಂದ್ರ ಬಜೆಟ್ 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೂ ಹಣ ಮೀಸಲಿರಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಕೇಂದ್ರ ಬಜೆಟ್ 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೂ ಹಣ ಮೀಸಲಿರಿಸಲಾಗಿದೆ.

ಹೌದು.. ಪ್ರಧಾನಿ ನರೇಂದ್ರ ಮೋದಿ ಅವರೊಬ್ಬರಿಗೆ ಮಾತ್ರ ಪ್ರಸ್ತುತ 3000 ಮಂದಿಯ ಬಲಿಷ್ಠ ತಂಡ ಹೊಂದಿರುವ ಎಸ್‌ಪಿಜಿ (ಸ್ಪೆಷಲ್ ಸೆಕ್ಯುರಿಟಿ ಗ್ರೂಪ್) ರಕ್ಷಣೆ ಇದ್ದು, ನರೇಂದ್ರ ಮೋದಿ ಅವರ ರಕ್ಷಣೆಗಾಗಿಯೇ ಬಜೆಟ್ ನಲ್ಲಿ ಸುಮಾರು 600 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. 2020–21ನೇ ಆರ್ಥಿಕ ವರ್ಷದಲ್ಲಿ 600 ಕೋಟಿ ರೂಗಳನ್ನು ಮೋದಿ ಭದ್ರತೆಗೆ ಮೀಸಲಿಡಲಾಗಿದ್ದು, ಕಳೆದ ಆರ್ಥಿಕ ವರ್ಷದಲ್ಲಿ 540 ಕೋಟಿ ರೂ ನೀಡಲಾಗಿತ್ತು. 

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಗ್ರರಿಂದ ಮತ್ತು ಕೆಲ ಸಮಾಜ ವಿದ್ರೋಹಿ ಸಂಘಟನೆಗಳಿಂದ ದೊಡ್ಡಮಟ್ಟದಲ್ಲಿ ಜೀವ ಬೆದರಿಕೆ ಇರುವುದನ್ನು ಒಪ್ಪಿಕೊಂಡಿದ್ದ ಕೇಂದ್ರ ಸರ್ಕಾರವು ಈ ಹಿಂದೆ ಭದ್ರತಾ ಮಾರ್ಗಸೂಚಿಯನ್ನು ಪರಿಷ್ಕರಿಸಿತ್ತು. ಎಸ್‌ಪಿಜಿ ತಪಾಸಣೆಯ ನಂತರವೇ ಮೋದಿ ಅವರ ಸನಿಹಕ್ಕೆ ಸಚಿವರು ಮತ್ತು ಅಧಿಕಾರಿಗಳನ್ನು ಕಳುಹಿಸಲಾಗುತ್ತಿತ್ತು.

ಇನ್ನು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಈ ಹಿಂದೆ ನೀಡಲಾಗಿದ್ದ ಎಸ್‌ಪಿಜಿ ರಕ್ಷಣೆಯನ್ನು ಕಳೆದ ನವೆಂಬರ್‌ನಲ್ಲಿ ಮರುಪರಿಶೀಲನೆಯ ನಂತರ ಹಿಂಪಡೆಯಲಾಗಿತ್ತು. ಈಗ ಗಾಂಧಿ ಕುಟುಂಬಕ್ಕೆ ಕೇಂದ್ರೀಯ ಮೀಸಲು ಪೊಲೀಸರು (ಸಿಆರ್‌ಪಿಫ್) ಝೆಡ್‌ ಪ್ಲಸ್ ಭದ್ರತೆ ನೀಡುತ್ತಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್.ಡಿ.ದೇವೇಗೌಡ ಮತ್ತು ವಿ.ಪಿ.ಸಿಂಗ್ ಅವರಿಗೆ ನೀಡಿದ್ದ ಎಸ್‌ಪಿಜಿ ಭದ್ರತೆಯನ್ನೂ, ಬೆದರಿಕೆಯ ಸ್ಥಿತಿಗತಿ ಪರಿಶೀಲನೆಯ ನಂತರ ಕೇಂದ್ರ ಸರ್ಕಾರ ಈ ಹಿಂದೆ ಹಿಂಪಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com