ಕರ್ನಾಟಕ ಬಜೆಟ್ 2021: ಕಳಸಾ-ಬಂಡೂರಿ ಯೋಜನೆಗೆ ಭರ್ಜರಿ ಅನುದಾನ ಘೋಷಣೆ

ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ರೂ. ಮೀಸಲಿಡಲಾಗಿದ್ದು, ಡಾ.ಡಿ.ಎಂ ನಂಜುಂಡಪ್ಪ ವರದಿಯಂತೆ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ 3000 ಕೋಟಿ ರೂ. ಒದಗಿಸಲಾಗಿದೆ. ಮಹದಾಯಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ 1,677 ಕೋಟಿ ರೂಪಾಯಿ ಅನುದಾನ, ಭದ್ರಾ ಮೇಲ್ದಂಡೆ ಯೋಜನೆ ಅಂದಾಜು ಮೊತ್ತಕ್ಕೆ ಅಸ್ತು, 21,474 ಕೋಟಿ ರೂ. ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದ್ದು, ರಾಷ್ಟ್ರೀಯ ಯೋಜನೆ ಎಂದು ಘೋಷಣೆಗೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೃಷ್ಣಾ ಭಾಗ್ಯ ಜಲನಿಗಮಕ್ಕೆ 5600 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆ ಭೂಸ್ವಾಧೀನ ಪ್ರಕ್ರಿಯೆಗೆ ಸರ್ಕಾರದ ನೆರವಿನ ಘೋಷಣೆಯಾಗಿದೆ.

ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ 4 ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. 2015 ರಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ ಮಹದಾಯಿ ಹೋರಾಟಗಾರರು ಒಂದು ವರ್ಷ ಕಾಲ ಧರಣಿ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಅದಾದ ಬಳಿಕ ನ್ಯಾಯಾಧಿಕರಣ ತೀರ್ಪು ಬಂದಿತ್ತು. 13.42 ಟಿಎಂಸಿ ನೀರು ಬಳಸಿಕೊಳ್ಳಲು ರಾಜ್ಯಕ್ಕೆ ಅವಕಾಶ ಸಿಕ್ಕಿತು. ಕೇಂದ್ರ ಸರ್ಕಾರ ಕೂಡ ನೀರು ಬಳಕೆ ಮಾಡಿಕೊಳ್ಳಲು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದ ನಂತರ ರಾಜ್ಯ ಸರ್ಕಾರ ಈ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳದಲ್ಲಿ ಹರಿಯುವ ನೀರು ಬಳಕೆ ಮಾಡಿಕೊಳ್ಳುವ ಕಾಮಗಾರಿಗೆ 500 ಕೋಟಿ ಮೀಸಲಿಟ್ಟಿತು. ಆದರೆ ಇದುವರೆಗೂ ಕಾಮಗಾರಿ ಪ್ರಾರಂಭ ಮಾಡಿ ನೀರು ಪಡೆದುಕೊಳ್ಳಲು ಮುಂದಾಗಿರಲಿಲ್ಲ.

ಈ ಬಾರಿ ಮಂಡನೆಯಾಗುತ್ತಿರುವ ಬಜೆಟ್ ನಲ್ಲಿ ಕಳಸಾ ಕಾಮಗಾರಿಗೆ ಅನುದಾನ ಸಿಗಬಹುದೇನ್ನುವ ನಿರೀಕ್ಷೆ ರೈತರಲ್ಲಿತ್ತು. ಅದು ಈಗ ಈಡೇರಿದ್ದು ಸಿಎಂ ಯಡಿಯೂರಪ್ಪನವರು 1,677 ಕೋಟಿ ರೂ. ಅನುದಾನ ನೀಡಿದ್ದಾರೆ. ಇದು ಮಹದಾಯಿ ಹೋರಾಟಗಾರರ ಸಂತಸಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com