ರಾಜ್ಯ ಬಜೆಟ್ 2021: ಬೆಂಗಳೂರು ನಗರ ಅಭಿವೃದ್ಧಿಗೆ 7795 ಕೋಟಿ ರೂ; 'ಒಂದು ರಾಷ್ಟ್ರ ಒಂದು ಕಾರ್ಡ್‌' ಮೆಟ್ರೋ ಸ್ಮಾರ್ಟ್‌ ಕಾರ್ಡ್‌

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 2021-22ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಒಟ್ಟು 7795 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 2021-22ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಒಟ್ಟು 7795 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. 

ಸೋಮವಾರ ತಮ್ಮ ಬಜೆಟ್‌ ಭಾಷಣ ಮಂಡಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು 2 ಕೋಟಿ ರೂ. ಮೀಸಲಿರಿಸುವುದಾಗಿ ಘೋಷಿಸಿದ್ದಾರೆ.

ಜೊತೆಗೆ, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ ಸ್ಥಾಪನೆ, ಆಗಸ್ಟ್ 2021ರೊಳಗೆ “ಒಂದು ರಾಷ್ಟ್ರ ಒಂದು ಕಾರ್ಡ್” ವ್ಯವಸ್ಥೆ ಜಾರಿಗೆ ಕ್ರಮ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶದಂತಹ ಪ್ರಮುಖ ಯೋಜನೆಯನ್ನು ಪ್ರಕಟಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವರ್ಕ್ಸ್‌ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ ಎಕ್ಸ್‌ಪೀರಿಯನ್ಸ್‌ ಬೆಂಗಳೂರು ಕೇಂದ್ರ ಅಭಿವೃದ್ಧಿ, ಬೈಯ್ಯಪ್ಪನಹಳ್ಳಿಯಲ್ಲಿ ಎನ್‌ಜಿಇಎಫ್‌ ಸೇರಿದಂತೆ ನಾಲ್ಕು ಪ್ರದೇಶಗಳಲ್ಲಿ ವೃಕ್ಷೋದ್ಯಾನಗಳ ಅಭಿವೃದ್ಧಿ, ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭ, 14,788 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 58.2 ಕಿ.ಮೀ. ಉದ್ದದ ಹೊರವರ್ತುಲ ರಸ್ತೆ- ಏರ್‌ಪೋರ್ಟ್‌ ಮೆಟ್ರೋ ಜಾಲ ಹಂತ ಹಂತ 2ಎ ಮತ್ತು 2ಬಿ ಅನುಷ್ಠಾನವನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ರಾಜ್ಯದ ಉಪನಗರ ಯೋಜನೆಗೆ 2021-22ನೇ ಸಾಲಿಗೆ 850 ಕೋಟಿ ರೂ. ಅನುದಾನ ಘೋಷಿಸಿರುವ ಸಿಎಂ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಕಟ್ಟಡ ನಿರ್ಮಾಣ ಶೀಋ್ಘ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಇದರಿಂದ ಗರಿಷ್ಠ ವಾರ್ಷಿಕ ಪ್ರಯಾಣಿಕರ ಸಾಮರ್ಥ್ಯ 60 ದಶಲಕ್ಷಕ್ಕೆ ಹೆಚ್ಚಳವಾಗಲಿದೆ. 

ಕೋರಮಂಗಲ ಕಣಿವೆಯನ್ನು ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿಪಡಿಸಲು 169 ಕೋಟಿ ರೂ. ವೆಚ್ಚದಲ್ಲಿ ಕೋರಮಂಗಲ ಕಣಿವೆ ನಿರ್ಮಾಣ, ರಾಜಕಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆಗೆ ಅನುದಾನ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ ಯೋಜನೆಯನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ. 

ಪ್ರಮುಖಾಂಶಗಳು
- ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಕಾರದೊಂದಿಗೆ 450 ಕೋಟಿ ರೂ. ವೆಚ್ಚದಲ್ಲಿ ಕೆ.ಸಿ.ವ್ಯಾಲಿ ಆವರಣದ 248 ಎಂ.ಎಲ್.ಡಿ ಸಾಮರ್ಥ್ಯದ ಎಸ್.ಟಿ.ಪಿ. ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ.
- ಆಗಸ್ಟ್ 2021ರೊಳಗೆ “ಒಂದು ರಾಷ್ಟ್ರ ಒಂದು ಕಾರ್ಡ್” ವ್ಯವಸ್ಥೆ ಜಾರಿಗೆ ಕ್ರಮ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ.
- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸ್ವಯಂಚಾಲಿತ ಶುಲ್ಕ ಸಂಗ್ರಹ ವ್ಯವಸ್ಥೆ ಯೋಜನೆ ಅನುಷ್ಠಾನ
- ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ ಸ್ಥಾಪನೆ.
- ಉತ್ತರ ಬೆಂಗಳೂರಿನಲ್ಲಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.
- 28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಹಾಗೂ ಆರ್ಗನ್ ಟ್ರಾನ್ಸ್‌ಪ್ಲಾಂಟ್ ಸಂಸ್ಥೆ ಪ್ರಸಕ್ತ ಸಾಲಿನಲ್ಲಿ ಕಾರ್ಯಾರಂಭ.
- ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ.
- ಬಿಬಿಎಂಪಿಯ 57 ವಾರ್ಡ್‍ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ.
- 33 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್‌ನಿರ್ಮಾಣ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com