
ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದ ಬಹು ನಿರೀಕ್ಷೆಯ 2021-22 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಮಂಡಿಸುತ್ತಿದ್ದಾರೆ.
ಇದು ಅವರ ಪಾಲಿನ 8ನೇ ಬಜೆಟ್ 8ನೇ ತಾರೀಖು 8ನೇ ಬಜೆಟ್ ಮಂಡನೆ ಮಾಡುತ್ತಿರುವುದು ನಿಜಕ್ಕೂ ಕಾಕತಾಳಿಯವೆನೋ...!
ಕೊರೊನಾ ಸಾಂಕ್ರಾಮಿಕ ರೋಗ, ಪ್ರವಾಹ ಹಾಗೂ ಬರದ ಹಿನ್ನೆಲೆಯಲ್ಲಿ ಆರ್ಥಿಕ ಸ್ಥಿತಿ ಗಂಭೀರವಾಗಿರುವುದರಿಂದ ಈ ಬಾರಿ ಸಮತೋಲಿತ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ..
ಕಳೆದ ಬಜೆಟ್ನಲ್ಲಿ ಘೋಷಣೆಯಾಗಿರುವ ಅನುದಾನದಲ್ಲಿ ಶೇ.60ರಷ್ಟು ಮಾತ್ರ ವೆಚ್ಚವಾಗಿದ್ದು, ಬಾಕಿ ಅನುದಾನವನ್ನೂ ಗಣನೆಗೆ ತೆಗೆದುಕೊಂಡು ಈ ವರ್ಷದ ಬಜೆಟ್ ಗಾತ್ರವನ್ನು ಹೆಚ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಮಾ 5 ರಂದು ಬಜೆಟ್ 2.37 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಲಾಗಿತ್ತು. ಮಹಿಳಾ ಅಭಿವೃದ್ಧಿ, ಪ್ರವಾಸೋದ್ಯಮ, ಕೃಷಿ, ನೀರಾವರಿ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಈ ಬಾರಿ ಹೊಸ ತೆರಿಗೆ, ಹೊಸ ಹೊರೆ ಇರುವುದಿಲ್ಲ ಎಂದೂ ಹೇಳಲಾಗುತ್ತಿದೆ.