ಸರ್ವಾಂಗೀಣ ಅಭಿವೃದ್ಧಿಯ ದೂರದೃಷ್ಟಿಯ ಬಜೆಟ್-ಡಿವಿಎಸ್; ಸಮತೋಲಿತ ಬಜೆಟ್-ಬೊಮ್ಮಾಯಿ

ಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಉಂಟಾದ ಆರ್ಥಿಕ ಹಿಂಜರಿತದ ಮಧ್ಯೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಶಯದೊಂದಿಗೆ ಸಮತೋಲಿತ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಡಿ ವಿ ಸದಾನಂದಗೌಡ
ಡಿ ವಿ ಸದಾನಂದಗೌಡ

ನವದೆಹಲಿ: ಕೊರೊನಾ ಸಂಕಷ್ಟದ ಹಿನ್ನಲೆಯಲ್ಲಿ ಉಂಟಾದ ಆರ್ಥಿಕ ಹಿಂಜರಿತದ ಮಧ್ಯೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಆಶಯದೊಂದಿಗೆ ಸಮತೋಲಿತ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ಯಡಿಯೂರಪ್ಪ ಅವರು ಮಂಡಿಸಿದ ಮುಂಗಡ ಪತ್ರದ ಬಗ್ಗೆ ದೆಹಲಿಯಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಇದನ್ನ ವಿಕಾಸ ಪತ್ರ ಎಂದು ಬಣ್ಣಿಸುವುದೇ ಸೂಕ್ತ ಎಂದರು.

ಶಿಕ್ಷಣ, ಸಂಶೋಧನೆ, ಆರೋಗ್ಯ, ರಸ್ತೆ, ನೀರಾವರಿ, ಪ್ರವಾಸೋದ್ಯಮ, ಕೈಗಾರಿಕೆ ಮತ್ತಿತರ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ.  44,237 ಕೋಟಿ ರೂ. ಬಂಡವಾಳ ವೆಚ್ಚಮಾಡುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಮತ್ಸೋದ್ಯಮ ಹಾಗೂ ಕೃಷಿ ಸೌಲಭ್ಯ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗಾಗಿ ಒಟ್ಟು 31,028 ಕೋಟಿ ರೂ ಒದಗಿಸಲಾಗಿದೆ.

ಪ್ರಗತಿಗೆ ಇಂಬು ಕೊಡುವ ಸಮತೋಲಿತ ಬಜೆಟ್; ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ 19 ರ  ಸಂಕಷ್ಟ ಸಂದರ್ಭದಲ್ಲಿಯೂ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಯಾವುದೇ ಹೊಸ ತೆರಿಗೆಗಳನ್ನು ಜನಸಾಮಾನ್ಯರ ಮೇಲೆ ಹೊರಿಸದೇ  ಪ್ರಗತಿಗೆ ಇಂಬು ಕೊಡುವ ಸಮತೋಲಿತ ಬಜೆಟ್ ಅನ್ನು ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೃಷಿ, ನೀರಾವರಿ,  ಮಹಿಳೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಮೂಲಸೌಕರ್ಯ ಕ್ಷೇತ್ರಗಳಿಗೆ ಬಜೆಟ್ ನಲ್ಲಿ ಪ್ರಾಧಾನ್ಯತೆ ನೀಡಲಾಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ನಂಜುಂಡಪ್ಪ ವರದಿಯ ಆಧಾರದ ಮೇಲೆ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ 3000 ಕೋಟಿ ರೂಪಾಯಿಗಳನ್ನು ನೀಡಿರುವುದು ಗಮನಾರ್ಹ.  ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಗಮನ ನೀಡಿರುವ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1500 ಕೋಟಿ ರೂಪಾಯಿ ಅನುದಾನವನ್ನು ಬಜೆಟ್ನಲ್ಲಿ ನಿಗದಿಪಡಿಸಿದ್ದಾರೆ. ನೀರಾವರಿ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಾಗಿದೆ. ಮೂಲಭೂತ ಸೌಕರ್ಯಕ್ಕೆ ಹಣದ ಬೆಂಬಲ ನೀಡಲಾಗಿದೆ. ಕಳೆದ ವರ್ಷ ಮಂಡಿಸಲಾದ ಬಜೆಟ್ ಅನ್ನು ಶೇ. 93ರಷ್ಟು ಸಾಧನೆ ಮಾಡುವ ವಿಶ್ವಾಸ ಮುಖ್ಯಮಂತ್ರಿಗಳಿಗೆ ಇದೆ ಎಂದರು.

ಮುಖ್ಯಮಂತ್ರಿಗಳು ಯಾವುದೇ ಹಳೇ ಯೋಜನೆಗಳನ್ನು ಕೈಬಿಟ್ಟಿಲ್ಲ. ರಾಜ್ಯದ ಪ್ರತಿಯೊಂದು ಜಿಲ್ಲೆಗೆ  ಅನುದಾನ ನೀಡಿರುವುದು ಈ ಬಜೆಟಿನ ವಿಶೇಷತೆ. ಗೃಹ ನಿರ್ಮಾಣಕ್ಕೆ ಗ್ರಾಮೀಣ ಅಭಿವೃದ್ಧಿಗೆ ಕುಡಿಯುವ ನೀರಿಗೆ ಮುಖ್ಯಮಂತ್ರಿಗಳು ಅತಿ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಜನರಿಗೆ ಹತ್ತಿರವಾಗಿ ಜನಸ್ನೇಹಿಯಾದ ಕಾರ್ಯಕ್ರಮಗಳನ್ನು ಯಡಿಯೂರಪ್ಪ ನೀಡಿದ್ದಾರೆ. ಸಂಕಷ್ಟದಲ್ಲಿ ಸಹಿತ ಜನರಿಗೆ ಯಾವುದೇ ರೀತಿಯದಂತಹ ಜನಪದ ಅಭಿವೃದ್ಧಿಗೆ ಪೂರಕವಾದ, ದೂರದೃಷ್ಟಿಯುಳ್ಳ ಬಜೆಟ್ ಅನ್ನು ಯಡಿಯೂರಪ್ಪ ಮಂಡಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com