ರಾಜ್ಯ ಬಜೆಟ್-2021 ರಲ್ಲಿ ಕ್ರೀಡಾ ಕ್ಷೇತ್ರದ ಅನುದಾನದ ವಿವರಗಳು ಇಂತಿವೆ....

ರಾಜ್ಯದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾನ ಅಸ್ತಿತ್ವಕ್ಕೆ ಬರಲಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. 

Published: 08th March 2021 03:08 PM  |   Last Updated: 08th March 2021 03:08 PM   |  A+A-


CM B S Yedyurappa

2021ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ

Posted By : Srinivas Rao BV
Source : Online Desk

ಬೆಂಗಳೂರು: ರಾಜ್ಯದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾನ ಅಸ್ತಿತ್ವಕ್ಕೆ ಬರಲಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. 

ಮಾ.08 ರಂದು ವಿಧಾಸಭೆಯಲ್ಲಿ 2021 ನೇ ಸಾಲಿನ  ಬಜೆಟ್ ಮಂಡನೆ ಮಾಡಿದ ಅವರು ಕ್ರೀಡಾ ಕ್ಷೇತ್ರಕ್ಕೆ ಹಲವು ಯೋಜನೆಗಳು, ಅನುದಾನಗಳನ್ನು ಘೋಷಿಸಿದ್ದಾರೆ. 

ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಂಡ್ಯ, ಬೆಂಗಳೂರು ಜಿಲ್ಲೆಗಳಿಗೆ ಗಮನಾರ್ಹ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಲಭ್ಯವಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಮೂಲಸೌಲಭ್ಯ ಸೃಜನೆ, 10 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ನಗರದ ಕ್ರೀಡಾಂಗಣದ ಉನ್ನತೀಕರಣ ಪ್ರಮುಖವಾಗಿವೆ. 

ಉಳಿದಂತೆ ಜಕ್ಕೂರಿನ ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ಸೌಲಭ್ಯಗಳ ಅಭಿವೃದ್ಧಿಗೆ 2 ಕೋಟಿ ರೂಪಾಯಿ, 2022 ರಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯ ಕ್ರೀಡಾಕೂಟ ಆಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ.


Stay up to date on all the latest ರಾಜ್ಯ ಬಜೆಟ್ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp