
ಸಿಎಂ ಯಡಿಯೂರಪ್ಪ
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ಭಾರೀ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
2020-21ರ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆ 7,115 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಜನವರಿ ಅಂತ್ಯಕ್ಕೆ 4,294 ಕೋಟಿ ರೂ. ಮಾತ್ರ ಆದಾಯ ಸಂಗ್ರಹವಾಗಿದೆ.
2021-22ರ ಸಾಲಿನಲ್ಲಿ 7,515 ಕೋಟಿ ರೂ. ಆದಯಾ ಸಂಗ್ರಹಣೆಯ ಗುರಿಯನ್ನು ಹಾಕಲಾಗಿದೆ. ಈ ವರ್ಷ ರಾಜ್ಯದಲ್ಲಿ 52 ಬಸ್ ನಿಲ್ದಾಣ, 16 ಬಸ್ ಘಟಕಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.
ಸಿಎಂ ಯಡಿಯೂರಪ್ಪ ಅವರು ಮಹಿಳೆಯರಿಗೆ ಬಿಎಂಟಿಸಿ ಬಸ್‌ಪಾಸ್‌ನಲ್ಲಿ ರಿಯಾಯಿತಿ ನೀಡುವುದಾಗಿ ತಿಳಿಸಿದ್ದಾರೆ.