ಕೇಂದ್ರ ಬಜೆಟ್ ಮಂಡನೆ ಮುಕ್ತಾಯ: ತೆರಿಗೆದಾರರಿಗೆ ನಿರಾಸೆ; ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
2022-23ನೇ ಸಾಲಿನ ಕೇಂದ್ರ ಬಜೆಟ್ ಮುಕ್ತಾಯಗೊಂಡಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. 2022-23ನೇ ಸಾಲಿನಲ್ಲೂ ನೇರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
Published: 01st February 2022 01:16 PM | Last Updated: 01st February 2022 03:03 PM | A+A A-

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: 2022-23ನೇ ಸಾಲಿನ ಕೇಂದ್ರ ಬಜೆಟ್ ಮುಕ್ತಾಯಗೊಂಡಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. 2022-23ನೇ ಸಾಲಿನಲ್ಲೂ ನೇರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದು, ಸತತ ಮೂರು ವರ್ಷಗಳಿಂದ ಟ್ಯಾಕ್ಸ್ ಸ್ಲ್ಯಾಬ್ ನಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ.
ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ತೆರಿಗೆ ಪದ್ಧತಿಯಲ್ಲಿ ಕೆಲ ವಿನಾಯ್ತಿ ಸಿಗಬಹುದು ಎಂಬ ನಿರೀಕ್ಷೆಗಳು ವ್ಯಕ್ತವಾಗಿದ್ದವು. ಆದರೆ ವಿತ್ತ ಸಚಿವರ ಇಂದಿನ ಭಾಷಣದಲ್ಲಿ ಇಂಥ ಯಾವುದೇ ಪ್ರಸ್ತಾವಗಳು ಮಂಡನೆಯಾಗಿಲ್ಲ. ಆದಾಯ ತೆರಿಗೆಗೆ ಈ ಬಾರಿ ಯಾವುದೇ ಹೊಸ ಸೆಸ್ ಅಥವಾ ಸರ್ಚಾರ್ಜ್ ಸೇರಿಲ್ಲ ಎನ್ನುವುದಷ್ಟೇ ಸಮಾಧಾನಕರ ವಿಚಾರವಾಗಿದೆ.
ಬಜೆಟ್ ಭಾಷಣ ಮುಕ್ತಾಯ, ಲೋಕಸಭೆ ಕಲಾಪ ನಾಳೆ ಮುಂದೂಡಿಕೆ
ಬಜೆಟ್ ಭಾಷಣ ಮುಕ್ತಾಯವಾಗಿದ್ದು, ಸ್ಪೀಕರ್ ಓಂ ಬಿರ್ಲಾ ಸೂಚನೆ ಮೇರೆಗೆ ಸಚಿವರು ಹಣಕಾಸು ವಿಧೇಯಕ ಮಂಡಿಸಿದರು.
ನಿರ್ಮಲಾ ಸೀತಾರಾಮನ್ನ ಈ ಹಿಂದಿನ ಬಜೆಟ್ ಭಾಷಣಗಳಿಗೆ ಹೋಲಿಸಿದರು ಇದು ಕಡಿಮೆ ಅವಧಿಯದ್ದು. ಈ ಬಾರಿ ವಿತ್ತ ಸಚಿವರು 90 ನಿಮಿಷಗಳಲ್ಲಿ ತಮ್ಮ ಬಜೆಟ್ ಭಾಷಣ ಮುಗಿಸಿದರು. ತೆರಿಗೆ ವಿಚಾರ ಮಾತನಾಡುವಾಗ ಮಹಾಭಾರತದ ಉಲ್ಲೇಖ ಹೊರತುಪಡಿಸಿದರೆ ಉಳಿದಂತೆ ಯಾವುದೇ ಕಾವ್ಯವನ್ನು ಈ ಬಾರಿಯ ಭಾಷಣದಲ್ಲಿ ವಿತ್ತ ಸಚಿವರು ಉಲ್ಲೇಖಿಸಲಿಲ್ಲ.
ನಿರ್ಮಲಾ ಸೀತಾರಾಮನ್ ಅವರು 1 ಗಂಟೆ 33 ನಿಮಿಷಗಳ ಕಾಲ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ ಭಾಷಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಲೋಕಸಭೆ ಕಲಾಪವನ್ನು ನಾಳೆ ಸಂಜೆ 4.30ಕ್ಕೆ ಮುಂದೂಡಲಾಯಿತು.