ರಾಜ್ಯ ಬಜೆಟ್ 2022: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ; ಗೌರವ ಧನ ಹೆಚ್ಚಿಸಿದ ರಾಜ್ಯ ಸರ್ಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಗೌರವ ಧನ ಹೆಚ್ಚಳ ಮಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ಗೌರವ ಧನ ಹೆಚ್ಚಳ ಮಾಡಲಾಗಿದೆ.

ಇದರ ಜತೆಗೆ, ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000 ರೂಪಾಯಿಯಿಂದ 1500 ರೂಗಳ ಹೆಚ್ಚಳ ಮಾಡಲಾಗುವುದು. ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com