2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
Published: 04th March 2022 01:03 PM | Last Updated: 04th March 2022 02:51 PM | A+A A-

ಬಜೆಟ್ ಪ್ರತಿಯೊಂದಿಗಿರುವ ಸಿಎಂ ಬೊಮ್ಮಾಯಿ
ಬೆಂಗಳೂರು: 2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಕೃಷಿ ಮತ್ತು ಪೂರಕ ಚಟುವಟಿಕೆಗಳು, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ಬೆಂಗಳೂರು ಸಮಗ್ರ ಅಭಿವೃದ್ಧಿ, ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆ,ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿ, ಮಕ್ಕಳ ಅಭ್ಯುದಯ ಎಂದು ವಿಂಗಡಣೆ ಮಾಡಿ ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡನೆ ಮಾಡಲಾಗುತ್ತಿದೆ.
ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಈ ಬಾರಿಯ ಬಜೆಟ್ ಮಂಡನೆಯಾಗುತ್ತಿದೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ.