ರಾಜ್ಯ ಬಜೆಟ್ 2022-23: ಹೊಸ ಘೋಷಣೆಗಳ ಬಗ್ಗೆ ಇಲ್ಲಿದೆ ವಿವರ

ತಮ್ಮ ಚೊಚ್ಚಲ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ಹಲವು ಹೊಸ ಘೋಷಣೆಗಳನ್ನು ಪ್ರಕಟಿಸಿದ್ದಾರೆ. 
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮ್ಮ ಚೊಚ್ಚಲ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ಹಲವು ಹೊಸ ಘೋಷಣೆಗಳನ್ನು ಪ್ರಕಟಿಸಿದ್ದಾರೆ. 

ಸಮತೋಲಿತ ಬಜೆಟ್ ನ್ನು ಮಂಡಿಸಿರುವ ಸಿಎಂ ಬೊಮ್ಮಾಯಿ ರೈತರ ಆದಾಯ ಹೆಚ್ಚಳವನ್ನು  ಆದ್ಯತೆಯನ್ನಾಗಿರಿಸಿಕೊಂಡಿದ್ದು,  ‘ರೈತ ಶಕ್ತಿ’ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ ನೀಡಲು 600 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ. 

ಹೊಸ ಯೋಜನೆಗಳ ವಿವರ ಹೀಗಿದೆ...

  • ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಖಾರ್‍ಲ್ಯಾಂಡ್ ಯೋಜನೆ ಅನುಷ್ಠಾನ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನ.
  • ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ಕ್ರಿಯಾ ಯೋಜನೆ. ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಅನುದಾನ.
  • ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ.

ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿ

  • ವಿವಿಧ ಅಭಿವೃದ್ಧಿ ಸೂಚಕಗಳಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಒಟ್ಟು 3,000 ಕೋಟಿ ರೂ. ಅನುದಾನ. 93 ತಾಲ್ಲೂಕುಗಳಲ್ಲಿ ಶಿಕ್ಷಣ ಗುಣಮಟ್ಟ ವೃದ್ಧಿ, 100 ತಾಲ್ಲೂಕುಗಳಲ್ಲಿ ಆರೋಗ್ಯ ಸೇವೆ ಬಲಪಡಿಸಲು ಮತ್ತು 102 ತಾಲ್ಲೂಕುಗಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಕ್ರಮ.
  • ಎರಡು ವರ್ಷಗಳಲ್ಲಿ 100 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ 25 ಹಾಸಿಗೆಯ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ತಲಾ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ; 1,000 ಕೋಟಿ ರೂ. ಅನುದಾನ.
     

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com