ಕರ್ನಾಟಕ ಬಜೆಟ್ 2022: ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ, ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಚಿಗೆ ಒತ್ತು
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ 2022ರಲ್ಲಿ ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಚಿಗೆ ಒತ್ತು ನೀಡಲಾಗಿದ್ದು, ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ ಮೀಸಲಿರಿಸಲಾಗಿದೆ.
Published: 04th March 2022 04:44 PM | Last Updated: 04th March 2022 04:44 PM | A+A A-

ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ 2022ರಲ್ಲಿ ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಚಿಗೆ ಒತ್ತು ನೀಡಲಾಗಿದ್ದು, ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ ಮೀಸಲಿರಿಸಲಾಗಿದೆ.
ಬೊಮ್ಮಾಯಿ ಅವರ ಬಜೆಟ್ ನಲ್ಲಿ ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ ಘೋಷಣೆ ಮಾಡಲಾಗಿದ್ದು, ಅಂತೆಯೇ ಕೊಡಗು ಮತ್ತು ಜಂಬೋಟಿ ಜೇನು ಜನಪ್ರಿಯತೆಗೆ ಆದ್ಯತೆ ನೀಡಲಾಗಿದ್ದು, ದ್ವಿತಳಿ ರೇಷ್ಮೇ ಗೂಡಿಗೆ 10 ಸಾವಿರ ರೂ.ಸಹಾಯಧನ ಘೋಷಣೆ ಮಾಡಲಾಗಿದೆ. ಅಂತೆಯೇ 8 ಪುಟಗಳಲ್ಲಿ ಪ್ರಕಟಗೊಳ್ಳುವ ಪತ್ರಿಕೆಗಳಿಗೆ ಹೊಸ ಯೋಜನೆ ರೂಪಿಸಲಾಗುತ್ತದೆ. ಬಳ್ಳಾರಿಯಲ್ಲಿ ಜೀನ್ಸ್ ಮತ್ತು ಸಿದ್ದ ಉಡುಪು ಕಾರ್ಖಾನೆ ಸ್ಥಾಪನೆ. ಮಕ್ಕಳ ಅಭಿವೃದ್ಧಿಗೆ 40.994 ಕೋಟಿ ರೂಪಾಯಿ ಅನುದಾನ, ಜವಳಿ ಪಾರ್ಕ್ ನಿಂದ 5 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಿಎಂ ಹೇಳಿದರು.
ಇದನ್ನೂ ಓದಿ: ಕರ್ನಾಟಕ ಬಜೆಟ್ 2022: ಗದಗ-ಯಲವಿಗಿ ನೂತನ ರೈಲು ಮಾರ್ಗ, ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಘೋಷಣೆ
ಅಂತೆಯೇ ಬೀದರ್ನಲ್ಲಿ 90 ಕೋಟಿ ವೆಚ್ಚದಲ್ಲಿ CIPET ಕೇಂದ್ರ ಸ್ಥಾಪನೆ, ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮತ್ತು ಸೆಂಟರ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋ ಕೆಮಿಕಲ್ಸ್ ಸ್ಥಾಪನೆ ಮಾಡಲಾಗುವುದು. ರಾಮನಗರದ ಅರ್ಚಕರಹಳ್ಳಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆರಂಭಿಸಲಾಗುತ್ತದೆ. ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
ಇದನ್ನೂ ಓದಿ: ರಾಜ್ಯ ಬಜೆಟ್ 2022-23: ಹೊಸ ಘೋಷಣೆಗಳ ಬಗ್ಗೆ ಇಲ್ಲಿದೆ ವಿವರ
ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ ಮಾಡಲಾಗುವುದು, ಇದರಿಂದ 10 ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಹೂಡಿಕೆದಾರರನ್ನು ಆಕರ್ಷಿಸಲು ‘ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮ ಆರಂಭಿಸಲಾಗುವುದು. ಬೆಂಗಳೂರಿನಲ್ಲಿ ನ.2ರಿಂದ 4ರವರೆಗೆ ‘ಇನ್ವೆಸ್ಟ್ ಕರ್ನಾಟಕ’ ಆರಂಭ ಮಾಡಲಾಗುವುದು.
ಇದನ್ನೂ ಓದಿ: ಬೊಮ್ಮಾಯಿ ಬಜೆಟ್ 2022-23: ಅಲ್ಪಸಂಖ್ಯಾತ ಸಮುದಾಯಗಳಿಗೆ ಸಿಕ್ಕಿದ್ದೇನು?
ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಅಗತ್ಯ ಪ್ರೋತ್ಸಾಹ, ರಾಜ್ಯದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತದೆ. ಉದ್ಯಮಿಗಳಿಗೆ ತರಬೇತಿ ನೀಡಲು ಕ್ರಮ ವಹಿಸಲಾಗುತ್ತದೆ. ರಾಜ್ಯಕ್ಕೆ ಬಂಡವಾಳ ಆಕರ್ಷಣೆ ಮಾಡಲು ನವೆಂಬರ್ 2 ರಿಂದ 4ರ ತನಕ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಮಹಿಳೆಯರ ಆರ್ಥಿಕ ಪ್ರಗತಿಗೆ ಸರ್ಕಾರ ಆದ್ಯತೆ. ಆಯ್ದ ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ಸ್ವತಂತ್ರ್ಯಕ್ಕಾಗಿ 1.5 ಲಕ್ಷ ರೂ. ನೆರವು. ಇದಕ್ಕಾಗಿ 500 ಕೋಟಿ ರೂ. ಅನುದಾನ ಮೀಸಲು. ರಾಜ್ಯದ ಐಟಿ -ಬಿಟಿ ಉತ್ತೇಜನ, ಯುವಜನಾಂಗಕ್ಕೆ ಉದ್ಯೋಗ ನೀಡಲು ಕ್ರಮ.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ, ಶಿಕ್ಷಣ, ಸಾಮಜಿಕ ಮತ್ತು ಮೈಕ್ರೋ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯ ಬಜೆಟ್ 2022: ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಹೆಚ್ಚಳ, ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ
ಇದಲ್ಲದೆ ಯುವಕರ ಸ್ವ-ಉದ್ಯೋಗ, ಆರ್ಥಿಕ ಚಟುವಟಿಕೆ ಪ್ರೋತ್ಸಾಹಕ್ಕೆ ನಿರ್ಧಾರಿಸಲಾಗಿದ್ದು, ಪ್ರತೀ ಗ್ರಾ.ಪಂನಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ ಮಾಡಲಾಗುವುದು. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು. ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ, 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಹೇಳಿದರು.
ಇದನ್ನೂ ಓದಿ: ರಾಜ್ಯ ಬಜೆಟ್ 2022: ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?
ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್ ಅಭಿವೃದ್ದಿ ಮಾಡಲಾಗುವುದು. ಅಂತೆಯೇ ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಹೊಸ ಯೋಜನೆಯನ್ನು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಕೆಪಿಎಸ್ಸಿ, ಯುಪಿಎಸ್ಸಿ, ಎಸ್ಎಸ್ಸಿ, ಬ್ಯಾಕಿಂಗ್, ರೈಲ್ವೆ, ನೀಟ್, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಉಚಿತ ಕೋಚಿಂಗ್ ಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.