ಕರ್ನಾಟಕ ಬಜೆಟ್ 2022: ಗದಗ-ಯಲವಿಗಿ ನೂತನ ರೈಲು ಮಾರ್ಗ, ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಘೋಷಣೆ

ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ರೈಲ್ವೇ ಯೋಜನೆಗಳಿಗೆ ಉತ್ತೇಜನ ನೀಡಲಾಗಿದ್ದು, ಅಷ್ಟೇನೂ ಹೊಸ ಯೋಜನೆಗಳು ಘೋಷಣೆಯಾಗದಿದ್ದರೂ ಹಳೆಯೋಜನೆಗಳ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ರೈಲ್ವೇ ಯೋಜನೆಗಳಿಗೆ ಉತ್ತೇಜನ ನೀಡಲಾಗಿದ್ದು, ಅಷ್ಟೇನೂ ಹೊಸ ಯೋಜನೆಗಳು ಘೋಷಣೆಯಾಗದಿದ್ದರೂ ಹಳೆಯೋಜನೆಗಳ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ.

ರೈಲು ಯೋಜನೆಗಳಲ್ಲಿ ಹೊಸದೇನು ಕಂಡು ಬಂದಿಲ್ಲವಾದರೂ, ಹಳೆ ಯೋಜನೆಗಳ ವಿಸ್ತರಣೆಯಾಗಿದೆ. ಈ ಪೈಕಿ ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕಾಗಿ 927 ಕೋಟಿ ರೂಪಾಯಿ ವೆಚ್ಚ ಅನುದಾನ ಮೀಸಲಿಡಲಾಗಿದ್ದು, 640 ಕೋಟಿ ರೂ. ವೆಚ್ಚದಲ್ಲಿ ಗದಗ-ಯಲವಿಗಿ ನೂತನ ರೈಲು ಮಾರ್ಗ ನಿರ್ಮಾಣ ಮಾಡಲಾಗುತ್ತದೆ. ಅಂತೆಯೇ ರಾಜ್ಯದಲ್ಲಿ 20 ನೂತನ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅಧ್ಯತೆ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಬೆಂಗಳೂರಿಗೆ ಉಪನಗರ ರೈಲ್ವೆ ಯೋಜನೆ
ಇತ್ತ ರಾಜಧಾನಿ ಬೆಂಗಳೂರಿಗೆ ಸಬ್ ಅರ್ಬನ್ ರೈಲು ಯೋಜನೆಗೆ15,267 ಕೋಟಿ ವೆಚ್ಚ ಮಂಜೂರು ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದು, 2026ರ ವೇಳೆಗೆ 148 ಕಿ.ಮೀ. ಮಾರ್ಗ ಪೂರ್ಣಗೊಳಿಸುವ ಭರವಸೆ ವ್ಯಕ್ತಪಡಿಸಿದರು.

ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಘೋಷಣೆ
ಇನ್ನು ವಿಮಾನಯಾನ ವಲಯಕ್ಕೂ ಬೊಮ್ಮಾಯಿ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದ್ದು, ರಾಜ್ಯದ ಎರಡನೇ ಸ್ತರದ ನಗರಗಳಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಅದರಂತೆ ರಾಯಚೂರಿನಲ್ಲಿ 186 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ. ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಘೋಷಣೆ ಮಾಡಲಾಗಿದ್ದು, ದಾವಣಗೆರೆ ಮತ್ತು ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕಾರ್ಯ ಸಾಧ್ಯತಾ ವರದಿಯನ್ನು ತಯಾರು ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಇದಲ್ಲದೆ 30 ಕೋಟಿ ವೆಚ್ಚದಲ್ಲಿ ಹೆಲಿಪೋರ್ಟ್‌ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಮಡಿಕೇರಿ, ಚಿಕ್ಕಮಗಳೂರು, ಹಂಪಿಯಲ್ಲಿ ರನ್ ವೇ ಸ್ಟಿಪ್ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com