ದೂರದೃಷ್ಟಿ ಇಲ್ಲದ 'ಅಡ್ಡ ಕಸುಬಿ' ಬಜೆಟ್- ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿರುವ ರಾಜ್ಯ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ವಿರೋಧಿ, ದೂರದೃಷ್ಟಿ ಇಲ್ಲದ ಅಡ್ಡ ಕಸುಬಿ ಬಜೆಟ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು ಬೊಮ್ಮಾಯಿ ಬಡಾಯಿ ಬಜೆಟ್ ಎಂದು ಲೇವಡಿ ಮಾಡಿದ್ದಾರೆ. 

Published: 04th March 2022 08:50 PM  |   Last Updated: 04th March 2022 09:05 PM   |  A+A-


Siddaramaiah1

ಸಿದ್ದರಾಮಯ್ಯ

Online Desk

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿರುವ ರಾಜ್ಯ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ವಿರೋಧಿ, ದೂರದೃಷ್ಟಿ ಇಲ್ಲದ ಅಡ್ಡ ಕಸುಬಿ ಬಜೆಟ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು ಬೊಮ್ಮಾಯಿ ಬಡಾಯಿ ಬಜೆಟ್ ಎಂದು ಲೇವಡಿ ಮಾಡಿದ್ದಾರೆ. 

ರಾಜ್ಯ ಬಜೆಟ್ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರ ಕೇವಲ ನಾಲ್ಕು ವರ್ಷಗಳ ಅವಧಿಯಲ್ಲಿ ರೂ. 2,66,000 ಕೋಟಿ ರೂಪಾಯಿ ಸಾಲ ಮಾಡಿದೆ. ಪ್ರತಿ ವರ್ಷ ಸಾಲದ ಮೇಲಿನ ಬಡ್ಡಿ ರೂಪದಲ್ಲಿ 29,000 ಕೋಟಿ ರೂ. ಪಾವತಿಸಬೇಕು. ಈ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿಯ ಹಂತಕ್ಕೆ ಕೊಂಡೊಯ್ದಿದೆ ಎಂದಿದ್ದಾರೆ.

ಈ ವರ್ಷದ ಜೂನ್ 30ರವರೆಗೆ ಮಾತ್ರ ನಮ್ಮ ರಾಜ್ಯಕ್ಕೆ ಜಿ.ಎಸ್. ಟಿ ಪರಿಹಾರ ಸಿಗುತ್ತದೆ. ಹಾಗಾಗಿ ಮುಂದಿನ ದಿನಗಳು ಇನ್ನಷ್ಟು ಕಷ್ಟಕರವಾಗಲಿದೆ. ಜಿಎಸ್ ಟಿ ಪರಿಹಾರವನ್ನು ಇನ್ನೂ ಐದು ವರ್ಷ ಮುಂದುವರೆಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವಂತೆ ಮಾಡಿದ್ದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆದರಿ ಸುಮ್ಮನಿದೆ. ಬಿಜೆಪಿಯವರ ಹೇಡಿತನದಿಂದ ರಾಜ್ಯದ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2022: ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ; 'ಸ್ವಾಗತಾರ್ಹ' ಎಂದ ಡಿಕೆಶಿ

ಬಜೆಟ್ ನಲ್ಲಿ ನೀರಾವರಿ ಇಲಾಖೆಗೆ ರೂ. 20,601 ಕೋಟಿ ಇಡುವುದರೊಂದಿಗೆ ರೈತ ವಿರೋಧಿ ಧೋರಣೆ ಮತ್ತೊಮ್ಮೆ ಸಾಬೀತಾಗಿದೆ. ಮೇಕೆದಾಟು ಯೋಜನೆಗೆ ಪರಿಸರ ಇಲಾಖೆ ಅನುಮತಿ ಪತ್ರ ಪಡೆಯದೆ ಬಜೆಟ್ ನಲ್ಲಿ ಹಣ ಮೀಸಲಿಟ್ಟ ಕೂಡಲೇ ಯೋಜನೆ ಜಾರಿಯಾಗುತ್ತಾ ಎಂದು ಪ್ರಶ್ನಿಸಿದ್ದು, ಇದು ಜನರ ಹಾದಿ ತಪ್ಪಿಸುವ ಹತಾಶ ಪ್ರಯತ್ನವಲ್ಲದೆ ಬೇರೇನಲ್ಲ ಎಂದಿದ್ದಾರೆ. 

ಬಜೆಟ್ ನಲ್ಲಿ ಎಸ್ .ಸಿ.ಪಿ/ ಟಿ.ಎಸ್. ಪಿ ಯೋಜನೆಗೆ ಹಣ ಹೆಚ್ಚಾಗಿ ಇಟ್ಟಿಲ್ಲ. ದೀನ ದಯಾಳ್ ಉಪಾಧ್ಯಾಯ ಹೆಸರಿನಲ್ಲಿ ರಾಜ್ಯದ 5 ಜಿಲ್ಲೆಗಳಲ್ಲಿ ತಲಾ ಸಾವಿರ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣದ ಪ್ರಸ್ತಾವನೆ ಅವಾಸ್ತವಿಕ ಮತ್ತು ಅಸಾಧ್ಯವಾದ ಕೆಲಸವಾಗಿದೆ. ಗೋಶಾಲೆಗಳ ಗೋವು ದತ್ತು ಪಡೆಯುವವರಿಗೆ ತಲಾ ರೂ.11,000 ಕೊಡುವ ಪುಣ್ಯಕೋಟಿ ಯೋಜನೆ ಘೋಷಿಸಿದ್ದಾರೆ. ಇದರ ಬದಲಿಗೆ ಆ ಹಣವನ್ನು ನೇರವಾಗಿ ರೈತರಿಗೆ ನೀಡಿದರೆ ಅವರೇ ಗೋವುಗಳನ್ನು ನೋಡಿಕೊಳ್ಳುವುದಿಲ್ಲವೇ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


Stay up to date on all the latest ರಾಜ್ಯ ಬಜೆಟ್ news
Poll
mallikarjuna kharge

ರಾಜಸ್ತಾನದಲ್ಲಿ ಪೈಲಟ್-ಗೆಹ್ಲೋಟ್ ನಡುವೆ ಬಿಕ್ಕಟ್ಟು; ಕೇರಳದಲ್ಲಿ ಸ್ವಪಕ್ಷದವರ ವಿರುದ್ಧ ತರೂರ್ ಫೈಟು: ಕಾಂಗ್ರೆಸ ಒಳಜಗಳ ಬಿಡಿಸಲು ಮಲ್ಲಿಕಾರ್ಜುನ ಖರ್ಗೆ ಗೆ ಸಾಧ್ಯವಾಗುವುದೇ?


Result
ಹೌದು
ಆಗದು

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Nagaraj SK

    ಕೇಂದ್ರದಲ್ಲಿ 70 ವರ್ಷ, ರಾಜ್ಯದಲ್ಲಿ ಸುಮಾರು ವರ್ಷ ನಿಮ್ಮ ಕಿತ್ತೋಗಿರೋ ಕಾಂಗ್ರೆಸ್ ಪಕ್ಷ ಗುಡಿಸಿ ಗುಂಡಾಂತರ ಮಾಡಿರುವುದನ್ನು ಸರಿಪಡಿಸಲು ಸಮಯ ಬೇಕು. ಮೊದಲು ನಿಮ್ಮ ದುರ್ಗಂಧವನ್ನು ತೊಳೆದುಕೊಳ್ಳಿ.
    8 months ago reply
flipboard facebook twitter whatsapp