ರಾಜ್ಯ ಬಜೆಟ್ 2022: ಜಲಸಂಪನ್ಮೂಲ ಇಲಾಖೆಗೆ 20,106 ಕೋಟಿ ರೂ.; ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ತಲಾ 1 ಸಾವಿರ ಕೋಟಿ ರೂ.

2022-23ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಲಸಂಪನ್ಮೂಲ ಇಲಾಖೆಗೆ 20,106 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಲಸಂಪನ್ಮೂಲ ಇಲಾಖೆಗೆ 20,106 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. 

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು ಯೋಜನೆ ಹಾಗೂ ಕಳಸಾ ಬಂಡೂರಿ ಯೋಜನೆಗಳಿಗೆ ತಲಾ 1 ಸಾವಿರ ಕೋಟಿ ರುಪಾಯಿ ಅನುದಾನ ಘೋಷಿಸಲಾಗಿದೆ. 

ಇನ್ನುಳಿದಂತೆ ಕಾಳಿ ನದಿಯಿಂದ ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ತರಲಿದ್ದು ಇದರಿಂದ ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ನೀರು ಪೂರೈಕೆಯಾಗಲಿದೆ.

* ನೀರಾವರಿ ಸೌಕರ್ಯಕ್ಕೆ 7000 ಕೋಟಿ ರೂಪಾಯಿ.
* ಗಂಗಾಕಲ್ಯಾಣ ಯೋಜನೆಗೆ 1115 ಸಾವಿರ ಕೋಟಿ ರೂಪಾಯಿ.
* ರಾಝ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ. 
* ಕೃಷ್ಣಾಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ. 
* ಎತ್ತಿನ ಹೊಳೆ ಯೋಜನೆಗೆ 3 ಸಾವಿರ ಕೋಟಿ ರೂಪಾಯಿ ಅನುಧಾನ
* ಭದ್ರಾ ಮೇಲ್ಡಂಡೆ ಯೋಜನೆಗೆ 3 ಸಾವಿರ ಕೋಟಿ ಅನುದಾನ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com