ರಾಜ್ಯ ಬಜೆಟ್ 2022: ದುರ್ಬಲ ವರ್ಗಗಳ ಸಬಲೀಕರಣಕ್ಕೆ 800 ಕೋಟಿ, ಅಬ್ದುಲ್ ಕಲಾಂ, ನಾರಾಯಣ ಗುರು ಹೆಸರಲ್ಲಿ ವಸತಿ ಶಾಲೆ!
ಈ ಬಾರಿ ಬಜೆಟ್ ನಲ್ಲಿ ಎಸ್‌ಸಿ, ಎಸ್‌ಟಿ, ಇತರೇ ವರ್ಗಗಳ ಜನರ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
Published: 04th March 2022 03:24 PM | Last Updated: 04th March 2022 04:35 PM | A+A A-

ಬಿಎಸ್ ಬೊಮ್ಮಾಯಿ
ಬೆಂಗಳೂರು: ಈ ಬಾರಿ ಬಜೆಟ್ ನಲ್ಲಿ ಎಸ್‌ಸಿ, ಎಸ್‌ಟಿ, ಇತರೇ ವರ್ಗಗಳ ಜನರ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
ರಾಜ್ಯದಲ್ಲಿ ಮೊಹಲ್ಲಾ ಕ್ಲಿನಿಕ್. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ 100 ವಸತಿ ನಿಲಯ ಘೋಷಣೆ ಮಾಡಲಾಗಿದೆ. ದುರ್ಬಲ ವರ್ಗಗಳ ಸಬಲೀಕರಣಕ್ಕಾಗಿ ಸಮಾಜ ಇಲಾಖೆಯ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ವ್ಯಾಪ್ತಿಗೆ ಬರುವ ಯೋಜನೆಗಳಿಗೆ 800 ಕೋಟಿ ರೂ ನೀಡಲಾಗಿದೆ.
ದೀನದಯಾಳ್ ಉಪಾಧ್ಯಾಯ ಹಾಸ್ಟೆಲ್‌ಗಳ ಸ್ಥಾಪನೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ದೀನ್‌ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.
ಅಬ್ದುಲ್ ಕಲಾಂ ಹೆಸರಲ್ಲಿ ವಸತಿ ಶಾಲೆ
ಪ್ರತಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಒಂದು ಶಾಲೆಯನ್ನು ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ ಪದವಿ ಪೂರ್ವ ತರಗತಿ ಪ್ರಾರಂಭ; ಸಿಬಿಎಸ್‌ಇ ಮಾನ್ಯತೆ ಪಡೆಯಲು ಕ್ರಮ, 25 ಕೋಟಿ ರೂ. ಅನುದಾನ ನೀಡಲಾಗಿದೆ.
ನಾರಾಯಣ ಗುರುಗಳ ಹೆಸರಲ್ಲಿ ವಸತಿ ಶಾಲೆ
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸುವುದಾಗಿ ಸಿಎಂ ಘೋಷಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು ಇಡಲಾಗಿದೆ.
ದುರ್ಬಲ ವರ್ಗಗಳ ಸಬಲೀಕರಣಕ್ಕಾಗಿ 800 ಕೋಟಿ ಮೀಸಲು
ವೀರಶೈವ ಲಿಂಗಾಯತ ಸಮುದಾಯಕ್ಕೆ 100 ಕೋಟಿ, ಒಕ್ಕಲಿಗ ಅಭಿವೃದ್ಧಿ ನಿಗಮ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 50 ಕೋಟಿ, ಜೈನ, ಸಿಖ್, ಬೌದ್ದ ಸಮುದಾಯ 50 ಕೋಟಿ ಮೀಸಲಿಟ್ಟ ಸರ್ಕಾರ. ಎಸ್ಸಿ ಎಸ್ಟಿ ಅಭಿವೃದ್ಧಿ ನಿಗಮಗಳಲ್ಲಿ 500 ಕೋಟಿ ಯೋಜನೆ ಅನುಷ್ಠಾನಕ್ಕೆ ಮೀಸಲಿರಿಸಿದೆ.