ಕೇಂದ್ರ ಬಜೆಟ್ 2022: ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಯೋಜನೆಗೆ ಬೆಂಗಳೂರಿನ ನಿಮ್ಹಾನ್ಸ್ ಆಯ್ಕೆ
ಕೇಂದ್ರ ಬಜೆಟ್ 2022ರಲ್ಲಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯನ್ನು ನೋಡಲ್ ಕೇಂದ್ರವಾಗಿ ಆಯ್ಕೆ ಮಾಡಲಾಗಿದೆ.
Published: 02nd February 2022 01:44 PM | Last Updated: 02nd February 2022 02:55 PM | A+A A-

ನಿಮ್ಹಾನ್ಸ್ ಆಸ್ಪತ್ರೆ (ಸಂಗ್ರಹ ಚಿತ್ರ)
ಬೆಂಗಳೂರು: ಕೇಂದ್ರ ಬಜೆಟ್ 2022ರಲ್ಲಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯನ್ನು ನೋಡಲ್ ಕೇಂದ್ರವಾಗಿ ಆಯ್ಕೆ ಮಾಡಲಾಗಿದೆ. ಇದಕ್ಕೆ ತಂತ್ರಜ್ಞಾನದ ಬೆಂಬಲ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ಎಲ್ಲಾ ವಯಸ್ಸಿನ ಜನರಿಗೆ ಈ ಉಪಕ್ರಮವು ಹೆಚ್ಚು ಅಗತ್ಯವಿರುವ ಮಾನಸಿಕ ಆರೋಗ್ಯ ಬೆಂಬಲವನ್ನು ಒದಗಿಸುತ್ತದೆ. ಈ ಉಪಕ್ರಮವು 23 ಶ್ರೇಷ್ಠತೆಯ ಕೇಂದ್ರಗಳ ಜಾಲವನ್ನು ಒಳಗೊಂಡಿರುತ್ತದೆ ಮತ್ತು ನಿಮ್ಹಾನ್ಸ್ ಇವುಗಳಿಗೆ ನೋಡಲ್ ಕೇಂದ್ರವಾಗಿದೆ. ಸಾಂಕ್ರಾಮಿಕ ರೋಗದ ಕಳೆದ ಎರಡು ವರ್ಷಗಳಲ್ಲಿ ದೈಹಿಕ, ಮಾನಸಿಕ ಮತ್ತು ಆರ್ಥಿಕ ಬದಲಾವಣೆಗಳಿಗೆ ಹೊಂದಿಕೊಳ್ಳುತ್ತಿರುವ ದೇಶಾದ್ಯಂತ ಲಕ್ಷಾಂತರ ಜನರಿಗೆ ಇದು ಸಹಾಯ ಮಾಡುವ ನಿರೀಕ್ಷೆಯಿದೆ.
ಮಾನಸಿಕ ಆರೋಗ್ಯ ತಜ್ಞರು ಬಜೆಟ್ನಲ್ಲಿ ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಿರುವುದನ್ನು ಶ್ಲಾಘಿಸಿದ್ದಾರೆ. ಇದು ಇಂದಿನ ಅಗತ್ಯವಾಗಿದೆ ಎಂದು ನಿಮ್ಹಾನ್ಸ್ ನಿರ್ದೇಶಕಿ ಡಾ ಪ್ರತಿಮಾ ಮೂರ್ತಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದರು, 'ಮಾನಸಿಕ ಆರೋಗ್ಯ ರಕ್ಷಣೆಯಲ್ಲಿ ತಜ್ಞರ ಕೊರತೆ ಮತ್ತು ಮನೋರೋಗ, ಆತಂಕ, ಖಿನ್ನತೆ, ಮಾದಕ ದ್ರವ್ಯ ಸೇವನೆ ಮುಂತಾದ ವಿವಿಧ ಅಸ್ವಸ್ಥತೆಗಳಿಗೆ ಚಿಕಿತ್ಸೆಯ ಅಂತರವಿರುವುದರಿಂದ ಈ ಕಾರ್ಯಕ್ರಮವು ಸ್ವಾಗತಾರ್ಹ ಕ್ರಮವಾಗಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೇಶದ ಜನರು ಚಿಕಿತ್ಸೆ ಪಡೆಯುವ ನಡವಳಿಕೆಯನ್ನು ಹೊಂದಿಲ್ಲದಿರುವುದರಿಂದ ಇದು ಒಂದು ಸವಾಲಾಗಿದೆ ಎಂದು ಅವರು ವಿವರಿಸಿದರು.
ಹೆಲ್ಪ್ಲೈನ್ 26.08 ಲಕ್ಷ ಕೌನ್ಸೆಲಿಂಗ್
“24/7 ಟೆಲಿ-ಹೆಲ್ಪ್ಲೈನ್ ಬಾಧಿತ ಜನರಿಗೆ ಸಹಾಯ ಮಾಡಬೇಕು. ಇದು ಪ್ರತ್ಯೇಕ ರಾಜ್ಯಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ದೂರದ ಪ್ರದೇಶಗಳಿಗೆ ಮಾನಸಿಕ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಸಾಂಕ್ರಾಮಿಕ ರೋಗದ ಮೊದಲ ಮತ್ತು ಎರಡನೆಯ ಅಲೆಗಳ ಸಮಯದಲ್ಲಿ 25 ಲಕ್ಷಕ್ಕೂ ಹೆಚ್ಚು ಟೆಲಿ ಕೌನ್ಸೆಲಿಂಗ್ ಸೆಷನ್ಗಳನ್ನು ನಡೆಸುವುದರೊಂದಿಗೆ ಕರ್ನಾಟಕದಲ್ಲಿ ಇದೇ ರೀತಿಯ ಉಪಕ್ರಮವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಇದೇ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ಸಾಂಕ್ರಾಮಿಕ ರೋಗದ ಆರಂಭದಲ್ಲಿಯೇ ಕರ್ನಾಟಕವು ಮಾನಸಿಕ ಆರೋಗ್ಯ ಸಮಾಲೋಚನೆಯ ಅಗತ್ಯವನ್ನು ಗುರುತಿಸಿತ್ತು ಮತ್ತು ಟೆಲಿ ಕೌನ್ಸೆಲಿಂಗ್ಗಾಗಿ ಸಹಾಯವಾಣಿಗಳನ್ನು ಸ್ಥಾಪಿಸಿತು. ಇಲ್ಲಿಯವರೆಗೆ, ನಿಮ್ಹಾನ್ಸ್ನಲ್ಲಿ ಸ್ಥಾಪಿಸಲಾದ ಸಹಾಯವಾಣಿಯು ಸಾಂಕ್ರಾಮಿಕ ಸಮಯದಲ್ಲಿ ತನ್ನ ಟೆಲಿ-ಕೌನ್ಸೆಲಿಂಗ್ ಸೆಷನ್ಗಳ ಮೂಲಕ 26.08 ಲಕ್ಷ ಜನರಿಗೆ ಸಲಹೆ ನೀಡಿದೆ ಎಂದು ಹೇಳಿದರು.
ತಜ್ಞರನ್ನು ಖುದ್ದಾಗಿ ಭೇಟಿ ಮಾಡುವುದು ಕಷ್ಟಕರವಾಗಿರುವ ಈ ಸಂದರ್ಭದಲ್ಲಿ ಟೆಲಿಮೆಡಿಸಿನ್ ಮತ್ತು ಟೆಲಿ ಕೌನ್ಸೆಲಿಂಗ್ ಸೇವೆಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಸ್ಪಂದನ ಆಸ್ಪತ್ರೆಯ ಅಧ್ಯಕ್ಷ ಹಾಗೂ ಸಂಸ್ಥಾಪಕ ಡಾ.ಮಹೇಶ್ ಗೌಡ ಹೇಳಿದ್ದಾರೆ.