ಬಜೆಟ್ 2023 Live: ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಭಾಷಣವನ್ನು ಲೋಕಸಭೆಯಲ್ಲಿ ಆರಂಭಿಸಿದರು. ಆರಂಭದಲ್ಲಿಯೇ ವಿರೋಧ ಪಕ್ಷದ ನಾಯಕರು ಘೋಷಣೆ ಕೂಗಲು ಪ್ರಾರಂಭಿಸಿದರು.
Published: 01st February 2023 11:10 AM | Last Updated: 01st February 2023 11:54 AM | A+A A-

ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾಷಣ
ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಭಾಷಣವನ್ನು ಲೋಕಸಭೆಯಲ್ಲಿ ಆರಂಭಿಸಿದರು. ಆರಂಭದಲ್ಲಿಯೇ ವಿರೋಧ ಪಕ್ಷದ ನಾಯಕರು ಘೋಷಣೆ ಕೂಗಲು ಪ್ರಾರಂಭಿಸಿದರು.
ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿದೆ ಮತ್ತು ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುವ ಯೋಜನೆಯೊಂದಿಗೆ ಯಾರೂ ಹಸಿವಿನಿಂದ ಮಲಗಿಲ್ಲ, ಇದು ಸರ್ಕಾರದ ಯಶಸ್ಸು ಎಂದರು.