2023-24ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ  ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ  ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ರಾಜ್ಯ ಬಜೆಟ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಿಎಂ ಬೊಮ್ಮಾಯಿಯವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಇಂದು ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್ ಟಿ ನಗರದ ಮುತ್ತಪ್ಪ ಬ್ಲಾಕ್ ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಅವರು, ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಬಳಿಕ ತಮ್ಮ ನಿವಾಸಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದರು.

ಈ ವೇಳೆ ಹಣಕಾಸು ಇಲಾಖೆ ಅಧಿಕಾರಿಗಳಾದ ಐ ಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಬಳಿಕ ಸಚಿವ ಸಂಪುಟ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಬಜೆಟ್‌ಗೆ ಒಪ್ಪಿಗೆ ಪಡೆದುಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com